Bengaluru Rain Alert: ಕಳೆದ ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿಯೂ ಮಳೆಯಾಗುತ್ತಿದೆ. ಮುಂದಿನ ವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೇ 7 ಮತ್ತು 8 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ವರದಿಗಳು ಬರುತ್ತಿವೆ. ಸಿಲಿಕಾನ್ ಸಿಟಿಯಲ್ಲಿಯೂ ಮಳೆಯಾಗುತ್ತಿದ್ದು, ಶುಕ್ರವಾರದ ಮಳೆ ರಾಜಧಾನಿ ಜನರ ಜೀವನ ಅಸ್ತವ್ಯಸ್ಥ ಉಂಟಾಗಿತ್ತು. ಶುಕ್ರವಾರ ಸುರಿದ ಮಳೆಯಿಂದಾಗಿ ಬೆಂಗಳೂರಿನ ತಾಪಮಾನ ಇಳಿಕೆಯಾಗಿದೆ.
25
ಬೆಂಗಳೂರಿನಲ್ಲಿ ಮಂದಿನ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮೇ 7 ಮತ್ತು ಮೇ 8ರಂದು ಎರಡು ದಿನ ರಾಜಧಾನಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಎರಡು ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
35
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಹಾಸನ ಭಾಗದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕನಿಷ್ಠ 22 ಡಿಗ್ರಿ ಸೆಲ್ಸಯಸ್ ಮತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಸಂಜೆ 5 ಗಂಟೆ ನಂತರ ಬೆಂಗಳೂರಿನಲ್ಲಿ ಮಳೆ ಶುರುವಾಗಲಿದೆ. ರಾತ್ರಿ 8 ಗಂಟೆಗೆ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆಗಳಿವೆ.
55
ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ
ಮಳೆಯಾಗುತ್ತಿರುವ ಹಿನ್ನೆಲೆ ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ- ಕರುಗಳನ್ನು ತೊಳೆಯುವುದು ಹಾಗೂ ಫೋಟೋ/ ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.