ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ಹಲವು ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಸ್ಥಾಪಕ ದಿವಂಗತ ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳು ಹಣಕಾಸು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಪಿಇಎಸ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ,ಎಲೆಕ್ಟ್ರಾನಿಕ್ ಸಿಟಿ ಕಾಲೇಜ್ , ಹನುಮಂತನಗರ ಕಾಲೇಜ್ , ಆಂಧ್ರದ ಕುಪ್ಪಂ ಕಾಲೇಜ್ ಸೇರಿದಂತೆ ಹಲವೆಡೆ ದಾಳಿ ನಡೆದಿರುವ ಮಾಹಿತಿ ಲಭ್ಯವಾಗಿದೆ
26
ಪಿಇಎಸ್ ಶಿಕ್ಷಣ ಸಂಸ್ಥೆ
ಇಂದು ಬೆಳಗ್ಗೆ ಸುಮಾರು 6 ಗಂಟೆ ರಾಜ್ಯ ಹಾಗೂ ಹೊರ ರಾಜ್ಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಶಾಖೆಗಳ ಮೇಲೆ ದಾಳಿ ನಡೆಸಲಾಗಿದೆ. ದಿವಂಗತ ದೊರೆಸ್ವಾಮಿ ನಾಯ್ಡು ಅವರು ಪಿಇಎಸ್ ಶಿಕ್ಷಣ ಸಂಸ್ಥೆ ಸ್ಥಾಪಿಸಿದ್ದರು.
36
ದಾಖಲೆಗಳ ಪರಿಶೀಲನೆ
ಇದೀಗ ದೊರೆಸ್ವಾಮಿ ನಾಯ್ಡು ಅವರ ಸಂಬಂಧಿಕರ ಮನೆಗಳಿಗೂ ಐಟಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.
ಬೆಂಗಳೂರಿನ ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ದೊರೆಸ್ವಾಮಿ ನಾಯ್ಡು ನಿವಾಸದ ಮೇಲೆಯೂ ದಾಳಿ ನಡೆಸಲಾಗಿದೆ. ಚೆನ್ನೈ, ಮಂಗಳೂರು ಮತ್ತು ಆಂಧ್ರ ಪ್ರದೇಶದಿಂದ ಸುಮಾರು 200ಕ್ಕೂ ಅಧಿಕಾರಿಗಳು ಬಂದಿರುವ ಮಾಹಿತಿ ಲಭ್ಯವಾಗಿದೆ.
56
ಪಿಇಎಸ್ ಶಿಕ್ಷಣ ಸಂಸ್ಥೆ
ಶಿಕ್ಷಣ ಸಂಸ್ಥೆ ಸ್ಥಾಪಕರಾಗಿರುವ ದೊರೆಸ್ವಾಮಿ ಅವರು ಇದೇ ವರ್ಷ ಮಾರ್ಚ್ 25ರಂದು ನಿಧನರಾಗಿದ್ದರು. ಇದೀಗ ದೊರೆಸ್ವಾಮಿ ಪುತ್ರ ಜವಹರ್ ದೊರೆಸ್ವಾಮಿ ಪಿಇಎಸ್ ಶಿಕ್ಷಣ ಸಂಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.
ಕಾಲೇಜಿನ ಹಣಕಾಸು ಲೆಕ್ಕ, ಪೀಠೋಪಕರಣಗಳ ಖರೀದಿ, ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಖರ್ಚು ಮಾಡಿರುವ ಹಣದ ವಿವರ, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಪಡೆಯುವ ಶುಲ್ಕದ ಮಾಹಿತಿಯನ್ನ ಅಧಿಕಾರಿಗಳು ಪಡೆಯುತ್ತಿದ್ದಾರೆ.