ಬಿಎಂಆರ್‌ಸಿಎಲ್, ದಿನಾಂಕ 19.01.2025 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದು, ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ, 07:00 ರಿಂದ 10.00 ರವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೈಲು ಸೇವೆ ಇರುವುದಿಲ್ಲ.