ಮೆಜೆಸ್ಟಿಕ್ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕಿಗೆ ಜಿಗಿದು ರೈಲಿನಡಿ ಸಿಲುಕಿದ ಪ್ರಯಾಣಿಕ

Published : Oct 04, 2025, 04:03 PM ISTUpdated : Oct 04, 2025, 04:48 PM IST

Bengaluru Metro: ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ( ಮೆಜೆಸ್ಟಿಕ್ ) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ 19 ನಿಮಿಷಕ್ಕೆ ಈ ಘಟನೆ ನಡೆದಿದೆ. ಆತ್ಮ*ಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ವ್ಯಕ್ತಿ ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

PREV
13
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ

ವ್ಯಕ್ತಿಯೋರ್ವ ರೈಲು ಬರುತ್ತಿರುವ ಸಂದರ್ಭದಲ್ಲಿ ಹಳಿ ಮೇಲೆ ಜಿಗಿದಿರುವ ಘಟನೆ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ( ಮೆಜೆಸ್ಟಿಕ್ ) ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ 19 ನಿಮಿಷಕ್ಕೆ ಈ ಘಟನೆ ನಡೆದಿದೆ.

23
ಹಸಿರು ಮಾರ್ಗ

ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಹಸಿರು ಮಾರ್ಗದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಪ್ರಯಾಣಿಕ ರೈಲಿನಡಿ ಸಿಲುಕಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಮೆಜೆಸ್ಟಿಕ್ 3ನೇ ಫ್ಲಾಟ್ ಫಾರಂನಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಆತ್ಮ*ಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ವ್ಯಕ್ತಿ ಮುಂದಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

33
ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ

ರೈಲಿನಡಿ ಸಿಲುಕಿದ್ದ ವ್ಯಕ್ತಿಯನ್ನು ಮೇಲಕ್ಕೆ ಕರೆದುಕೊಂಡು ಬರಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವ್ಯಕ್ತಿಯ ವಯಸ್ಸು ಅಂದಾಜು 40 ಎಂದು ಹೇಳಲಾಗುತ್ತಿದ್ದು, ಗುರುತು ಪತ್ತೆಯಾಗಿಲ್ಲ. ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ.

Read more Photos on
click me!

Recommended Stories