ಅನುಮಾನ ಮೂಡಿಸಿದ ಚಟುವಟಿಕೆಗಳು:
ಆಂಧ್ರ ಮೂಲದ ಅತ್ತಾಹ್ ಉಲ್ಲಾ ಖಾನ್ ಎಂಬ ವ್ಯಕ್ತಿ ಈ ಫ್ಲಾಟ್‌ನಲ್ಲಿ ವಾಸವಾಗಿದ್ದ. ಕಳೆದ ಕೆಲವು ದಿನಗಳಿಂದ ಈತನ ಫ್ಲ್ಯಾಟ್‌ನಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಅಪಾರ್ಟ್‌ಮೆಂಟ್ ನಿವಾಸಿಗಳು ಗಮನಿಸಿದ್ದರು. ಈತ ಹಾವುಗಳ ಸಾಗಾಟ ಮಾಡುತ್ತಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಸದಸ್ಯರು, ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪರಿಶೀಲನೆ ವೇಳೆ ಪತ್ತೆಯಾದ ಪೈಥಾನ್:
ನಿನ್ನೆ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕಾಮಾಕ್ಷಿಪಾಳ್ಯ ಪೊಲೀಸರು ಜಂಟಿಯಾಗಿ ಫ್ಲಾಟ್ ಮೇಲೆ ದಾಳಿ ನಡೆಸಿದರು. ಮನೆಯನ್ನು ತಪಾಸಣೆ ನಡೆಸಿದಾಗ ಅಲ್ಲಿನ ಒಂದು ಕಾಟನ್ ಬಾಕ್ಸ್‌ನಲ್ಲಿ ಹೆಬ್ಬಾವನ್ನು ಇರಿಸಿರುವುದು ಕಂಡುಬಂದಿದೆ. ಯಾವುದೇ ಅನುಮತಿ ಇಲ್ಲದೆ ಅಪಾಯಕಾರಿ ಹಾವನ್ನು ಅಪಾರ್ಟ್‌ಮೆಂಟ್‌ನಲ್ಲಿ ಸಾಕುತ್ತಿರುವುದನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ.