ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್‌ಸಿಎಲ್) ನೀಲಿ ಮಾರ್ಗ ಯೋಜನೆಯ ಕಾಮಗಾರಿ ಮುಂದುವರಿಸಲು ಸುಪ್ರೀಂ ಕೋರ್ಟ್ ಸ್ಪಷ್ಟ ಅನುಮತಿ ನೀಡಿದೆ. ಕೆ.ಆರ್. ಪುರಂನಿಂದ ವಿಮಾನ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ಈ ಯೋಜನೆಯ ಶೇ.84ರಷ್ಟು ಕಾಮಗಾರಿ ಪೂರ್ಣಗೊಂಡಿದೆ.
ಸುಪ್ರೀಂ ಕೋರ್ಟ್‌ನಿಂದ ಬಿಎಂಆರ್‌ಸಿಎಲ್‌ಗೆ ಗ್ರೀನ್ ಸಿಗ್ನಲ್
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತನ್ನ ನೀಲಿ ಮಾರ್ಗ ಯೋಜನೆಯ ನಿರ್ಮಾಣ ಕಾರ್ಯಗಳನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟ ಅನುಮತಿ ನೀಡಿದೆ. ಈ ಹಿಂದೆ ನೀಡಲಾಗಿದ್ದ ಯಥಾಸ್ಥಿತಿ ಆದೇಶವು ಮೆಟ್ರೋ ಕಾಮಗಾರಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.
25
ವಿಚಾರಣೆ ನಡೆಸಿದ ಪೀಠ
ಮೆಟ್ರೋ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ ಅವರ ಪೀಠವು ಈ ಆದೇಶವನ್ನು ಹೊರಡಿಸಿತು. ಈ ನೀಲಿ ಮಾರ್ಗ ಯೋಜನೆಯಿಂದ ಬೆಂಗಳೂರು ನಗರದ ಸಂಚಾರ ದಟ್ಟಣೆ ಮತ್ತಷ್ಟು ಕಡಿಮೆಯಾಗಲಿದೆ ಎಂಬ ಆಶಯವನ್ನು ನ್ಯಾಯಪೀಠ ವ್ಯಕ್ತಪಡಿಸಿದೆ.
35
ಭೂಮಿ ಸ್ವಾಧೀನ ಮತ್ತು ನಷ್ಟ ಪರಿಹಾರ
ಲೇಕ್‌ವ್ಯೂ ಪ್ರವಾಸೋದ್ಯಮ ಯೋಜನೆಗೆ ಸ್ವಾಧೀನಪಡಿಸಿಕೊಂಡಿದ್ದ ಭೂಮಿಯಲ್ಲಿ, ಹೆಬ್ಬಾಳ ಗ್ರಾಮದ ಸುಮಾರು 1 ಎಕರೆ 26 ½ ಗುಂಟೆ ಭೂಮಿಯನ್ನು ಬಿಎಂಆರ್‌ಸಿಎಲ್‌ಗೆ ಹಸ್ತಾಂತರಿಸಲಾಗಿದ್ದು, ಇದಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ (KIADB) ₹20.31 ಕೋಟಿಗೂ ಅಧಿಕ ಹಣವನ್ನು ಠೇವಣಿ ಇಡಲಾಗಿದೆ.
ವಿಮಾನ ನಿಲ್ದಾಣಕ್ಕೆ ಇಂಟರ್‌ಚೇಂಜ್ ಸೌಲಭ್ಯ, ಶೇಕಡಾ 84 ರಷ್ಟು ಕಾಮಗಾರಿ ಪೂರ್ಣ
ಈ ಯೋಜನೆಯು ಕೆ.ಆರ್. ಪುರಂನಿಂದ ಹೆಬ್ಬಾಳ ಮಾರ್ಗವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ವಿಮಾನ ನಿಲ್ದಾಣ ಮಾರ್ಗದೊಂದಿಗೆ ಇಂಟರ್‌ಚೇಂಜ್ ಸೌಲಭ್ಯವನ್ನು ಒದಗಿಸಲಿದೆ. ಬಿಎಂಆರ್‌ಸಿಎಲ್ ಈಗಾಗಲೇ ಕಾರಿಡಾರ್‌ನಲ್ಲಿ ಸುಮಾರು 84% ನಷ್ಟು ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿದೆ.
55
ಜೂನ್ 2027 ಕ್ಕೆ ಯೋಜನೆ ಪೂರ್ಣಗೊಳಿಸುವ ಗುರಿ
ಜನವರಿ 2022 ರಲ್ಲಿ ಪ್ರಾರಂಭವಾದ ಈ ಯೋಜನೆಯನ್ನು ಜೂನ್ 2027 ರೊಳಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ನಿರ್ಧರಿಸಲಾಗಿದ್ದು, ವಿಳಂಬವಾದರೆ ರಾಜ್ಯ ಖಜಾನೆಗೆ ಭಾರಿ ಆರ್ಥಿಕ ನಷ್ಟವಾಗಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.