ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನೀಗಲು ಪಾರ್ಕಿಂಗ್‌ ಶುಲ್ಕ ಹೆಚ್ಚಳಕ್ಕೆ ಆರ್ಥಿಕ ಸಮೀಕ್ಷೆ ಪ್ರಸ್ತಾಪ!

Published : Jan 30, 2026, 09:37 AM IST

ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆಯು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ. ಈ ಕ್ರಮವು ನಗರದಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಿ, ವಾಹನ ಸಂಚಾರದ ವೇಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

PREV
15

ಬೆಂಗಳೂರಲ್ಲಿ ಹೆಚ್ಚು ಪಾರ್ಕಿಂಗ್‌ ಶುಲ್ಕ ವಿಧಿಸಲು ಆರ್ಥಿಕ ಸಮೀಕ್ಷೆ ಪ್ರಸ್ತಾಪ ಮಾಡಿದೆ. ನಗರದಲ್ಲಿ ವಾಹನ ದಟ್ಟಣೆ ನಿವಾರಣೆಗೆ ಈ ಕ್ರಮ ಅನಿವಾರ್ಯ ಎಂದು ಕೇಂದ್ರ ಸರ್ಕಾರ ಹೇಳಿದೆ.

25

ಸಂಸತ್ತಿನಲ್ಲಿ ಗುರುವಾರ ಮಂಡಿಸಿದ ಆರ್ಥಿಕ ಸಮೀಕ್ಷೆಯು ಬೆಂಗಳೂರಲ್ಲಿ ಹೆಚ್ಚು ಪಾರ್ಕಿಂಗ್‌ ಶುಲ್ಕ ವಿಧಿಸುವ ಪ್ರಸ್ತಾಪ ಮಾಡಿದೆ.

35

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸಮೀಕ್ಷೆ ಮಂಡಿಸಿ, ‘ದೆಹಲಿ, ಮುಂಬೈ, ಬೆಂಗಳೂರು ಮತ್ತಿತರ ಹೆಚ್ಚು ವಾಹನದಟ್ಟಣೆ ಇರುವ ನಗರಗಳಲ್ಲಿ ಬೇಡಿಕೆ ಆಧಾರಿತ ಪಾರ್ಕಿಂಗ್‌ ಮ್ಯಾನೇಜ್‌ಮೆಂಟ್‌ನಂಥ ಕ್ರಮಗಳನ್ನು ಜಾರಿಗೊಳಿಸುವ ಮೂಲಕ ಟ್ರಾಫಿಕ್‌ ಸಮಸ್ಯೆ ನಿವಾರಿಸಿ, ವಾಹನ ಸಂಚಾರದ ವೇಗವನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸಿದರು.

45

‘ವಿದೇಶಗಳಲ್ಲಿ ಹೆಚ್ಚು ವಾಹನದಟ್ಟಣೆ ಅವಧಿಯಲ್ಲಿ ಹೆಚ್ಚಿನ ಟೋಲ್‌ ಹಾಗೂ ಹೆಚ್ಚು ಟ್ರಾಫಿಕ್‌ ಇರುವ ಪ್ರದೇಶಗಳಲ್ಲಿ ವಾಹನಗಳಿಗೆ ಪಾರ್ಕಿಂಗ್‌ ಪ್ರತ್ಯೇಕ ಶುಲ್ಕ ವಿಧಿಸುತ್ತಿರುವ ಕ್ರಮಗಳಿವೆ. ಭಾರತಲ್ಲೂ ಇದನ್ನು ಜಾರಿಗೆ ತರಬೇಕಿದೆ’ ಎಂದರು. ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ಇ-ಬಸ್‌ಗಳ ಬಳಕೆಗೆ ಉತ್ತೇಜನ ನೀಡಲೂ ಸಮೀಕ್ಷೆ ಸಲಹೆ ನೀಡಿದೆ.

55

2025-26ರ ಆರ್ಥಿಕ ಸಮೀಕ್ಷೆಯ ಪ್ರಕಾರ, ದಕ್ಷಿಣ ರಾಜ್ಯಗಳಾದ ಕರ್ನಾಟಕ -39, ತೆಲಂಗಾಣ -7 ಮತ್ತು ತಮಿಳುನಾಡು -5 ಭಾರತದಲ್ಲಿನ ಒಟ್ಟು ಸ್ಟಾರ್ಟ್‌ಅಪ್‌ಗಳಲ್ಲಿ ಅರ್ಧಕ್ಕಿಂತ ಹೆಚ್ಚು ನೆಲೆಯಾಗಿವೆ.

Read more Photos on
click me!

Recommended Stories