Bengaluru: ಮರಕ್ಕೆ ಡಿಕ್ಕಿ ಹೊಡೆದ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳ ಕಾರ್; ಇಬ್ಬರ ಸಾವು

Published : Nov 17, 2026, 08:43 AM IST

ಮಾಗಡಿಯ ಗುಡೇಮಾರನಹಳ್ಳಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಪ್ತಗಿರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಇನ್ನೊಂದು ಘಟನೆಯಲ್ಲಿ ಚಿತ್ರದುರ್ಗದ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದರೂ 42 ಪ್ರಯಾಣಿಕರು ಪಾರಾಗಿದ್ದಾರೆ.

PREV
14
ಭೀಕರ ರಸ್ತೆ ಅಪಘಾತ, ವಿದ್ಯಾರ್ಥಿಗಳ ಸಾವು

ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

24
ಹಾಸನದಿಂದ ಬೆಂಗಳೂರಿಗೆ ಬರುತ್ತಿದ್ದ ಕಾರ್

ಹಾಸನದಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಚಾಲಕನ ನಿದ್ದೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಗಳೂರಿನ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳಾದ ಗಾನವಿ ಮತ್ತು ವೈಷ್ಣವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

34
ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲು

ಗಂಭೀರವಾಗಿ ಗಾಯಗೊಂಡಿರುವ ಉಳಿದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತರ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

44
ಚಿತ್ರದುರ್ಗದಲ್ಲಿ ಅಪಘಾತ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟಜ್ಜನ ಕಪಿಲೆ ಬಳಿ ಸಾರಿಗೆ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸುರಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಬಸ್ ಅಪಘಾತಕ್ಕೀಡಾದರೂ ಅದೃಷ್ಟವಶಾತ್ ಭಾರೀ ದುರಂತವೊಂದು ತಪ್ಪಿದ್ದು, ಬಸ್ಸಿನಲ್ಲಿದ್ದ ಎಲ್ಲಾ 42 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read more Photos on
click me!

Recommended Stories