ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಕಳೆದ ಮೂರು ದಿನಗಳಲ್ಲಿ 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆ 18,000 ರೂ.ಗಳಷ್ಟು ಕುಸಿದಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳನ್ನು ತಿಳಿಯಿರಿ.
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ಮಾರುಕಟ್ಟೆ ಮೇಲೆ ನೇರ ಪರಿಣಮ ಬೀರುತ್ತಿದೆ. ಎರಡು ದೇಶಗಳ ಸಂಘರ್ಷದಿಂದಾಗಿ ಚಿನ್ನದ ದರ ಇಳಿಕೆಯಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 18,000 ರೂ.ಗಳವರೆಗೆ ಇಳಿಕೆಯಾಗಿದೆ.
27
ಭಾರತದಲ್ಲಿ ಮಂಗಳವಾರ ಚಿನ್ನದ ಬೆಲೆ ಕುಸಿತವಾಗಿತ್ತು. ಸತತ ಏರಿಕೆಯಿಂದ ಆತಂಕಕ್ಕೊಳಗಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದರು. ಮಂಗಳವಾರ 1 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 135 ರೂ. ಇಳಿಕೆ ಕಂಡು ಬಂದಿತ್ತು. ಇಂದು 24 ಕ್ಯಾರಟ್ 100 ಗ್ರಾಂ ಚಿನ್ನದ ದರದಲ್ಲಿ 2,700 ರೂ.ಕಡಿಮೆಯಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
ಚಿನ್ನದ ಜೊತೆಯಲ್ಲಿ ಬೆಳ್ಳಿ ದರದಲ್ಲಿಯೂ ಏರಿಳಿತ ಕಂಡು ಬರುತ್ತಿದೆ. ದೇಶದಲ್ಲಿ ಶುದ್ಧ ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ
10 ಗ್ರಾಂ: 1,080 ರೂಪಾಯಿ
100 ಗ್ರಾಂ: 10,800 ರೂಪಾಯಿ
1000 ಗ್ರಾಂ: 1,08,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.