ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಕಾಯುತ್ತಿರುವ 8ನೇ ವೇತನ ಆಯೋಗದ ಕುರಿತು ಕೇಂದ್ರ ಸರ್ಕಾರದಿಂದ ಸಮಾಧಾನಕರ ಸುದ್ದಿ. ರಾಜ್ಯ ಸರ್ಕಾರಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಭರವಸೆ.
ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 8ನೇ ವೇತನ ಆಯೋಗಕ್ಕಾಗಿ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಇದೀಗ 8ನೇ ಪೇ ಕಮಿಷನ್‌ಗಾಗಿ ಕಾಯುತ್ತಿರೋ ಫಲಾನುಭವಿಗಳಿಗೆ ಸಮಾಧಾನಕರ ಸುದ್ದಿಯೊಂದು ಬಂದಿದೆ. ಆಯೋಗ ರಚನೆಯಲ್ಲಿನ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿತ್ತು.
25
ಎಂಟನೇ ವೇತನ ಆಯೋಗದ ವಿಷಯವನ್ನು ರಾಜ್ಯ ಸರ್ಕಾರಗಳೊಂದಿಗೆ ಗಂಭೀರವಾಗಿ ಚರ್ಚೆ ನಡೆಸಲಾಗುವುದು. ಶೀಘ್ರದಲ್ಲಿಯೇ ವೇತನ ಆಯೋಗ ರಚನೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಳೆದ ತಿಂಗಳಷ್ಟೇ ಆಯೋಗದ ರಚನೆಯ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಗಿತ್ತು.
35
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಭಾರತೀಯ ಮಜ್ದೂರ್ ಸಂಘದ (BMS) ಸರ್ವೋಚ್ಚ ಸಂಸ್ಥೆಯಾದ ಸರ್ಕಾರಿ ನೌಕರರ ರಾಷ್ಟ್ರೀಯ ಒಕ್ಕೂಟದ (GENC) ನಿಯೋಗ, 8ನೇ ವೇತನ ಆಯೋಗಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿತ್ತು. ಈ ವರ್ಷ ಜನವರಿಯಲ್ಲಿಯೇ ಎಂಟನೇ ವೇತನ ಆಯೋಗವನ್ನು ರಚಿಸಲಾಗಿತ್ತು. ನೌಕರರು ವೇತನ ಆಯೋಗದ ಸದಸ್ಯರ ನೇಮಕಾತಿ ಮತ್ತು ಉಲ್ಲೇಖ ಅವಧಿಗಾಗಿ ಕಾಯುತ್ತಿದ್ದಾರೆ.
ನಿಯೋಗದ ಭೇಟಿ ಬಳಿಕ ಮಾತನಾಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಎಂಟನೇ ವೇತನ ಆಯೋಗದಲ್ಲಿನ ವಿಳಂಬ, ರಾಷ್ಟ್ರೀಯ ಪಿಂಚಣಿ ಯೋಜನೆ ಮತ್ತು ಏಕೀಕೃತ ಯೋಜನೆಯನ್ನು ತೆಗೆದುಹಾಕುವುದು, ಹಳೆಯ ಪಿಂಚಣಿ ಯೋಜನೆಯ ಮರುಸ್ಥಾಪನೆ ಮತ್ತು ಕೋವಿಡ್ -19 ಸಮಯದಲ್ಲಿ ತಡೆಹಿಡಿಯಲಾದ 18 ತಿಂಗಳ ಬಾಕಿ ಡಿಎ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
55
ಕೇಂದ್ರ ಸಚಿವರಿಂದ ಸಿಕ್ತು ಭರವಸೆ
ಜನವರಿಯಲ್ಲಿಯೇ ಎಂಟನೇ ವೇತನ ಆಯೋಗ ರಚನೆಯಾದ್ರೂ ಯಾವುದೇ ಪ್ರಗತಿ ಕಾಣದಿರೋದು ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಕೇಂದ್ರ ಸಚಿವರಿಂದ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ಸಿಕ್ಕಿದೆ. ಹಳೆಯ ಪಿಂಚಣಿ ಯೋಜನೆಯ ಪುನಃಸ್ಥಾಪನೆಗಾಗಿ ಪಿಂಚಣಿ ಕಾರ್ಯದರ್ಶಿಯೊಂದಿಗೆ ಶೀಘ್ರದಲ್ಲೇ ಮುಂದಿನ ಸಭೆ ನಡೆಸಲಾಗುವುದು. ಅನುಕಂಪದ ನೇಮಕಾತಿ, ಕೇಡರ್ ವಿಮರ್ಶೆ ಮತ್ತು ನಿಯಮಿತ ಜೆಸಿಎಂ ಸಭೆಗಳಂತಹ ಇತರ ವಿಷಯಗಳನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಜಿತೇಂದ್ರ ಸಿಂಗ್ ತಮ್ಮನ್ನು ಭೇಟಿಯಾದ ನಿಯೋಗಕ್ಕೆ ಭರವಸೆ ನೀಡಿದ್ದಾರೆ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.