ಬೆಂಗಳೂರು: ಅಮೆರಿಕ ಹಾಗೂ ಇರಾನ್ ನಡುವಿನ ಯುದ್ದ ಭೀತಿಯ ಪರಿಣಾಮ ಸತತ ಏರಿಕೆಯತ್ತ ಮುಖಮಾಡಿದ್ದ ಚಿನ್ನದ ಬೆಲೆ ಇಂದು ದಿಢೀರ್ ಕುಸಿತ ಕಂಡಿದೆ. ಜುಲೈ 24ರಂದು ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ ಬನ್ನಿ
ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಮಹಾ ಕುಸಿತ ಕಂಡಿದೆ. ಕಳೆದ ಐದಾರು ದಿನಗಳಿಂದ ನಿರಂತರವಾಗಿ ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದ್ದ ಚಿನ್ನದ ಬೆಲೆಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಇದು ಚಿನ್ನ ಖರೀದಿಸುವವರು ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
26
ಚಿನ್ನದ ಬೆಲೆ ಕುಸಿತಕ್ಕೆ ಕಾರಣವೇನು?
ಮಧ್ಯಪ್ರಾಚ್ಯದ ಬೆಳವಣಿಗೆಗಳು, ಕಚ್ಚಾ ತೈಲದ ದರಗಳಲ್ಲಿನ ಏರಿಳಿತಗಳು, ಫೆಡರಲ್ ರಿಸರ್ವ್‌ನ ನೀತಿ ಸೂಚನೆಗಳು ಮತ್ತು ಹಣದುಬ್ಬರದ ನಿರೀಕ್ಷೆಗಳ ಮೇಲೆ ಮಾರುಕಟ್ಟೆ ಭಾಗಿದಾರರು ನಿರಂತರವಾಗಿ ಗಮನಹರಿಸುತ್ತಿದ್ದಾರೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಕುಸಿತ ಕಾಣಲಾರಂಭಿಸಿದೆ ಎಂದು ವರದಿಯಾಗಿದೆ.
36
24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1850 ರುಪಾಯಿ ಕುಸಿತ
ಇದೀಗ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,850 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,433 ರುಪಾಯಿಗಳಾಗಿದೆ. ಹಳದಿ ಲೋಹದ ಬೆಲೆ ಇಳಿಕೆಯಾಗುತ್ತಿರುವುದು, ಹೂಡಿಕೆ ಮಾಡುವವರಿಗೆ ಇದು ಸಕಾಲ ಎನ್ನಲಾಗುತ್ತಿದೆ.
22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1700 ರುಪಾಯಿ ಕುಸಿತ
ಇನ್ನೊಂದೆಡೆ 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಸುಮಾರು 1700 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 13,230 ರುಪಾಯಿಗಳಾಗಿದೆ.
56
ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಕುಸಿತ
ಇನ್ನು ಚಿನ್ನ ಮಾತ್ರವಲ್ಲದೇ ಬೆಳ್ಳಿ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ ಐದು ಸಾವಿರ ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಒಂದು ಕೆಜಿ ಬೆಳ್ಳಿ ಬೆಲೆ ಬರೋಬ್ಬರಿ 2,35,000 ಗಳಾಗಿದೆ.
66
ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಾಣುವ ಸಾಧ್ಯತೆ
ಒಟ್ಟಿನಲ್ಲಿ ವಾರಾಂತ್ಯದಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿರುವುದು ಆಭರಣ ಖರೀದಿಸುವವರ ಪಾಲಿಗೆ ಸಿಹಿಸುದ್ದಿಯಾಗಿ ಪರಿಣಮಿಸಿದೆ. ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಕುಸಿತ ಕಾಣುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.