ಇಂದು ಬೆಳಗ್ಗೆಯೇ ಜನರಿಗೆ ಎಲ್‌ಪಿಜಿ ದರ ಇಳಿಕೆಯ ಗುಡ್‌ನ್ಯೂಸ್ ಸಿಕ್ಕಿತ್ತು. ಮೊದಲು ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿತ್ತು. ಇದರ ಬೆನ್ನಲ್ಲೇ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ತಲೆ ಗಿರ್ ಅನ್ನುವಷ್ಟು ಚಿನ್ನದ ಬೆಲೆ ಹೆಚ್ಚಳವಾಗಿದೆ.
27
ಚಿನ್ನವನ್ನು ಸುರಕ್ಷಿತ ಹೂಡಿಕೆ ಮತ್ತು ಆಪತ್ಕಾಲದ ನೆಂಟ ಎಂದು ಕರೆಯಲಾಗುತ್ತದೆ. ಈ ಹಿನ್ನೆಲೆ ದರ ಎಷ್ಟೇ ಏರಿಕೆಯಾದ್ರೂ ಚಿನ್ನದ ಬೇಡಿಕೆ ಮಾತ್ರ ಕಡಿಮೆಯಾಗಲ್ಲ. ಇತ್ತೀಚಿನ ದಿನಗಳಲ್ಲಿ ಚಿನ್ನದ ಜೊತೆ ಬೆಳ್ಳಿ ಮೇಲಿನ ಹೂಡಿಕೆಯೂ ಹೆಚ್ಚಾಗುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂದು ನೋಡೋಣ ಬನ್ನಿ.
ಭಾನುವಾರ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿರಲಿಲ್ಲ. ಬೆಳ್ಳಿ ಮೇಲಿನ ಹೂಡಿಕೆ ಹೆಚ್ಚಾದ ಹಿನ್ನೆಲೆ ದರವೂ ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 1 ಲಕ್ಷ ರೂ.ಗೂ ಅಧಿಕ ಏರಿಕೆಯಾಗಿದೆ. ಇಂದಿನ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ.
10 ಗ್ರಾಂ: 1,260 ರೂಪಾಯಿ
100 ಗ್ರಾಂ: 12,600 ರೂಪಾಯಿ
1000 ಗ್ರಾಂ: 1,26,000 ರೂಪಾಯಿ
77
ಎಷ್ಟು ದರ ಏರಿಕೆ ಆಗಿದೆ?
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 850 ರೂ.ಗಳಷ್ಟು ಹೆಚ್ಚಳವಾಗಿದೆ
24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 930 ರೂ.ಗಳಷ್ಟು ಏರಿಕೆ ಕಂಡು ಬಂದಿದೆ.
ಇನ್ನು 1 ಕೆಜಿ ಬೆಳ್ಳಿ ದರದಲ್ಲಿ 1,000 ರೂ.ಗಳಷ್ಟು ಏರಿಕೆಯಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.