ಚಿನ್ನದ ದರದಲ್ಲಿಇಂದು ದಾಖಲೆಯ ಏರಿಕೆ ಕಂಡುಬಂದಿದ್ದು, ಜನಸಾಮಾನ್ಯರು ಚಿನ್ನ ಖರೀದಿಸುವುದು ಇನ್ನು ಕನಸೇ ಎಂಬಂತಾಗಿದೆ. ದರ ಏರಿಕೆಯ ಬಳಿಕ 24, 22, ಮತ್ತು 18 ಕ್ಯಾರೆಟ್ ಚಿನ್ನದ ಇಂದಿನ ದರ, ಪ್ರಮುಖ ನಗರಗಳಲ್ಲಿನ ಬೆಲೆಯ ವಿವರ ಇಲ್ಲಿದೆ..
ಕೆಲ ದಿನಗಳಿಂದ ಚಿನ್ನದ ದರ ಏರಿಕೆಯಾಗುತ್ತಲೇ ಇದೆ. ತುಸುವೇ ಇಳಿದು ಒಮ್ಮಿಂದೊಮ್ಮೆಲೆ ಭಾರಿ ಏರಿಕೆ ಆಗುವ ಚಿನ್ನದ ದರದಿಂದ ಜನಸಾಮಾನ್ಯರ ಚಿನ್ನ ಕೊಳ್ಳುವ ಆಸೆಗೆ ತಣ್ಣೀರೆರಚಿದಂತಾಗಿದೆ. ಬಹುತೇಕರು ಚಿನ್ನವನ್ನು ಆಭರಣಕ್ಕಿಂತ ಹೆಚ್ಚು ಆಸ್ತಿ ಎಂದು ಪರಿಗಣಿಸಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಚಿನ್ನದ ಬೆಲೆ ಬಹುತೇಕ ಭಾರತೀಯ ಷೇರು ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಅಮೆರಿಕಾದ ತೆರಿಗೆ ನೀತಿಯಿಂದಾಗಿ ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ ಬಹಳ ಏರಿಳಿತವಾಗುತ್ತಿದ್ದು, ಮಾರುಕಟ್ಟೆ ಕುಸಿತ ಕಾಣುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಹೋಗುತ್ತದೆ. ಹಾಗಿದ್ದರೆ ಇಂದಿನ ಚಿನ್ನಾಭರಣಗಳ ದರ ವಿವಿಧ ನಗರಗಳಲ್ಲಿ ಹೇಗಿದೆ ಅಂತ ನೋಡೋಣ.
27
ಚಿನ್ನದ ದರ ಇಂದು ಹೇಗಿದೆ
ವಿವಿಧ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ 24 ಹಾಗೂ 22 ಕ್ಯಾರೆಟ್ ಚಿನ್ನದ ದರ ಇಂದು ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಇಂದು 24 ಕ್ಯಾರೆಟ್ ಚಿನ್ನದ ದರದಲ್ಲಿ ನಿನ್ನೆಗಿಂತ ಏರಿಕೆಯಾಗಿದೆ. ಗ್ರಾಂ ಗೆ 11,433 ರೂಪಾಯಿ ಇದೆ. ಹಾಗೆಯೇ 22 ಕ್ಯಾರೆಟ್ ಚಿನ್ನದ 10,480 ಹಾಗೆಯೇ 18 ಕ್ಯಾರೆಟ್ ಚಿನ್ನದ ದರ 8,575 ಇದೆ.
37
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 11,433 ರೂಪಾಯಿ (ನಿನ್ನೆಗಿಂತ 126 ರೂಪಾಯಿ ಏರಿಕೆ)
8 ಗ್ರಾಂ ಚಿನ್ನದ ದರ 91464 ರೂಪಾಯಿ ( ನಿನ್ನೆಗಿಂತ 1008 ರೂಪಾಯಿ ಏರಿಕೆ)
10 ಗ್ರಾಂ ಚಿನ್ನದ ದರ 1,14,330 ರೂಪಾಯಿ (ನಿನ್ನೆಗಿಂತ 1260 ರೂಪಾಯಿ ಏರಿಕೆ)
100 ಗ್ರಾಂ ಚಿನ್ನದ ದರ 11,43,300 ರೂಪಾಯಿ (ನಿನ್ನೆಗಿಂತ 12,600 ರೂಪಾಯಿ ಏರಿಕೆ)