ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆ ನಿಗದಿಪಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಒಂದೆಡೆ ಅನಿಲ, ತೈಲದರಲ್ಲಿ ವ್ಯತ್ಯಾಸ ಆಗುವ ಜೊತೆಗೆ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗುತ್ತಿದೆ. ಹೀಗಾಗಿ ಜನರು ಬಿಸಿಲ ಬೇಗೆ ಜೊತೆಗೆ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆ ದರಕ್ಕೆ ಅನಿಲ ಸಿಲಿಂಡರ್ ಬೆಲೆ
ಆ ಪ್ರಕಾರ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬದಲಾಯಿಸುತ್ತಿವೆ. ಆದರೆ, ಬಹುತೇಕ ತಿಂಗಳುಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಆದರೆ ಇದೀಗ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 41 ರೂಪಾಯಿ ಇಳಿಕೆ ಮಾಡಲಾಗಿದೆ. ಇದು ಹಲವರ ನಿಟ್ಟುಸಿರಿಗೆ ಕಾರಣವಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ
ಪ್ರತಿ ತಿಂಗಳ 1 ರಂದು ತೈಲ ಕಂಪನಿಗಳು ಹೊಸ ಬೆಲೆಯನ್ನು ನಿಗದಿಪಡಿಸುತ್ತಿವೆ. ಕಳೆದ ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿತ್ತು. ಆದರೆ ಈ ಬಾರಿ ಏಪ್ರಿಲ್ 1 ರಂದು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ದಿಢೀರ್ ಇಳಿಕೆ ಮಾಡಿವೆ. ಇದರಿಂದ ಜನರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಫೆಬ್ರವರಿ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 7 ರೂಪಾಯಿ ಇಳಿಕೆ ಮಾಡಲಾಗಿತ್ತು. ಇದೀಗ 41 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಮೂಲಕ ಕಳೆದ 2 ತಿಂಗಳಲ್ಲಿ ಒಟ್ಟು 48 ರೂಪಾಯಿ ಇಳಿಕೆಯಾಗಿದೆ.
2024ರ ಡಿಸೆಂಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 62 ರೂಪಾಯಿ ಏರಿಕೆ ಮಾಡಲಾಗಿತ್ತು. ಈ ಪೈಕ ಇದೀಗ 48 ರೂಪಾಯಿ ಇಳಿಕೆಯಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಿಂದ ಹೊಟೆಲ್, ರೆಸ್ಟೋರೆಂಟ್ ಸೇರಿದಂತೆ ಇತರ ಬಳಕೆದಾರರಿಗೆ ನೆರವಾಗಲಿದೆ. ದುಬಾರಿ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ವಾಣಿಜ್ಯೋದ್ಯಮಕ್ಕೆ ಕೊಂಚ ರಲೀಫ್ ಸಿಕ್ಕಿದೆ.
ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಗೃಹ ಬಳಕೆ ಸಿಲಿಂಡರ್ ಬೆಲೆ ಯಥಾ ಪ್ರಕಾರ ಮುಂದುವರಿಯಲಿದೆ.