ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯು ಇಳಿಮುಖ ಮಾಡಿದೆ. ಇದು ಸಾಮಾನ್ಯ ಹಾಗೂ ಮಧ್ಯಮ ವರ್ಗದ ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಅಷ್ಟಕ್ಕೂ ಜೂನ್ 13ರಂದು ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ? ನೋಡೋಣ ಬನ್ನಿ.
ಕಚ್ಛಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಕುಸಿತ
ಅಮೆರಿಕ ಮತ್ತು ಇರಾನ್ ಮತ್ತೊಂದು ಸುತ್ತಿನ ಕ್ಷಿಪಣಿ ದಾಳಿ ನಡೆಸುವ ಮೂಲಕ ಮತ್ತೆ ಯುದ್ದ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ಕಚ್ಛಾ ತೈಲಗಳ ಬೆಲೆಯಲ್ಲಿ 4-5% ಏರಿಕೆ ಕಂಡಿದ್ದು, ಯುಎಸ್ ಡಾಲರ್ ಕೂಡಾ ಮತ್ತಷ್ಟು ಬಲವಾಗಿದೆ. ಇದರ ಬೆನ್ನಲ್ಲೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ.
26
ಸ್ಪಾಟ್ ಚಿನ್ನದ ಬೆಲೆ ಸುಮಾರು 2% ರಷ್ಟು ಕುಸಿತ
ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ಬೆಲೆ ಸುಮಾರು 2% ರಷ್ಟು ಕುಸಿತ ಕಂಡಿದ್ದು, ಪ್ರತಿ ಔನ್ಸ್‌ಗೆ $4,060ಕ್ಕಿಂತ ಕಡಿಮೆಯಾಗಿದೆ. ಕಚ್ಛಾ ತೈಲದ ಬೆಲೆ ಏರಿಕೆಯು ಹಣದುಬ್ಬರಕ್ಕೆ ಒಳ್ಳೆಯ ಸೂಚನೆಯಲ್ಲ. ಹೀಗಾಗಿ ಚಿನ್ನ ಮತ್ತು ಬೆಳ್ಳಿಯಂತಹ ಇಳುವರಿ ನೀಡದ ಸ್ವತ್ತುಗಳ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆಯಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಕಡಿಮೆ ಎನ್ನಲಾಗುತ್ತಿದೆ.
36
24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1420 ರುಪಾಯಿ ಕುಸಿತ
ಇದೀಗ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿಂದು ಸುಮಾರು ₹1,420 ರುಪಾಯಿ ಕುಸಿತವಾಗಿದೆ. ಈ ಮೂಲಕ ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,291 ರುಪಾಯಿಗಳಾಗಿದೆ. ಇದು ಚಿನ್ನದ ಮೇಲೆ ಹೂಡಿಕೆ ಮಾಡುವವರ ಪಾಲಿಗೆ ಗುಡ್ ನ್ಯೂಸ್ ಆಗಿದೆ.
22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1300 ರುಪಾಯಿ ಕುಸಿತ
ಇನ್ನೊಂದೆಡೆ 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲೂ ಸಹಾ ಭಾರೀ ಇಳಿಕೆ ಕಂಡಿದೆ. 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1300 ರುಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಇಂದು ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 13,100 ರುಪಾಯಿಗಳಾಗಿದೆ.
56
ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ
ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರು ಬಂಗಾರದ ಅಂಗಡಿಯತ್ತ ದಾಪುಗಾಲು ಹಾಕಲಾರಂಭಿಸಿದ್ದಾರೆ. ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಕುಸಿತ ಕಾಣುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
66
ಬೆಳ್ಳಿ ಬೆಲೆಯಲ್ಲಿ ಸ್ಥಿರ
ಇನ್ನು ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಇಳಿಕೆಯಾಗಿದ್ದರೂ ಬೆಳ್ಳಿ ಬೆಲೆಯು ಕಳೆದ ಮೂರು ದಿನಗಳಿಂದ ಯಾವುದೇ ಏರಿಳಿತ ಕಾಣದೇ ಸ್ಥಿರವಾಗಿದೆ. ಇದೀಗ ಒಂದು ಕೆಜಿ ಬೆಳ್ಳಿ ಬೆಲೆ 2,35,000 ರುಪಾಯಿಗಳಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.