ರಷ್ಯಾ, ಉಕ್ರೇನ್ ನಡುವಿನ ಯುದ್ಧದ ವಾತಾವರಣ ಕಡಿಮೆಯಾಗುತ್ತಿರುವುದು, ಟ್ರಂಪ್ ಈ ದಿಕ್ಕಿನಲ್ಲಿ ಹೆಜ್ಜೆ ಇಡುತ್ತಿರುವುದು ಮುಂತಾದ ಕಾರಣಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಷೇರು ಮಾರುಕಟ್ಟೆ ಕುಸಿದಿದ್ದರಿಂದ ಚಿನ್ನದಲ್ಲಿ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಚಿನ್ನದ ಬೆಲೆ ಏರಿಕೆ ಕಂಡಿದೆ. ಪ್ರಸ್ತುತ ರಷ್ಯಾ, ಉಕ್ರೇನ್ ನಡುವೆ ಮಾತುಕತೆ ನಡೆಯುತ್ತಿರುವುದರಿಂದ ಯುದ್ಧ ಅಂತ್ಯವಾಗುವ ಸಾಧ್ಯತೆಗಳು ಕಂಡುಬರುತ್ತಿವೆ. ಇದರಿಂದ ಷೇರು ಮಾರುಕಟ್ಟೆಗಳು ಏರಿಕೆಯಾಗುತ್ತಿವೆ. ಚಿನ್ನದ ಬೆಲೆ ಕಡಿಮೆಯಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ತಜ್ಞರು ಹೇಳುತ್ತಾರೆ. ಒಂದು ಅಂದಾಜಿನ ಪ್ರಕಾರ ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಔನ್ಸ್ ಚಿನ್ನದ ಬೆಲೆ 2800 ಡಾಲರ್‌ಗೆ ಇಳಿಯುವ ಸಾಧ್ಯತೆ ಇದೆ.