Gold And Silver Price: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದಿಂದ ಚಿನ್ನದ ಬೆಲೆ 9 ದಿನಗಳಿಂದ ಏರಿಕೆಯಾಗುತ್ತಿದೆ. ಪ್ರಮುಖ ನಗರಗಳಲ್ಲಿ 22 ಮತ್ತು 24 ಕ್ಯಾರಟ್ ಚಿನ್ನದ ದರಗಳ ವಿವರ ಇಲ್ಲಿದೆ.
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದ ಜೊತೆ ಚಿನ್ನದ ದರ ಏರಿಕೆಯಾಗುತ್ತಿದೆ. ಕಳೆದ 9 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಾಗುತ್ತಲೇ ಇದೆ. ಆಗಸ್ಟ್ 25ರಂದು ಕೊನೆಯ ಬಾರಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಆಗಸ್ಟ್ 31ರಂದು ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ
26
ಕಳೆದ 9 ದಿನಗಳಲ್ಲಿ 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 5,460 ರೂ.ಗಳಷ್ಟು ಏರಿಕೆಯಾಗಿದೆ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 880 ರೂ.ಗಳಷ್ಟು ಏರಿಕೆಯಾಗಿದೆ. ಇಂದು ಹೆಚ್ಚಳಗೊಂಡ ಹಣದಲ್ಲಿ ಬಡವರು ಐದು ದಿನ ಹೊಟ್ಟೆ ತುಂಬಾ ಊಟ ಮಾಡಬಹುದಾಗಿದೆ.
ಇಂದು 1 ಕೆಜಿ ಬೆಳ್ಳಿ ಬೆಲೆಯಲ್ಲಿ 900 ರೂಪಾಯಿಗಳಷ್ಟು ಏರಿಕೆಯಾಗಿದೆ. ಚಿನ್ನದ ಜೊತೆ ಬೆಳ್ಳಿ ದರವೂ ಸತತವಾಗಿ ಹೆಚ್ಚಾಗುತ್ತಲೇ ಇದೆ. ಇಂದಿನ ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ ಬನ್ನಿ.
10 ಗ್ರಾಂ: 1,270 ರೂಪಾಯಿ
100 ಗ್ರಾಂ: 12,700 ರೂಪಾಯಿ
1000 ಗ್ರಾಂ: 1,27,000 ರೂಪಾಯಿ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.