ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ, ಇಂದಿನ ದರ ಎಷ್ಟು?

Published : Jan 10, 2026, 01:58 PM IST

ಮಕರ ಸಂಕ್ರಾಂತಿ ಸಮೀಪಿಸುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ, ಇಂದು ಬೆಂಗಳೂರು ಸೇರಿದಂತೆ ದೇಶದಲ್ಲಿ ಬಂಗಾರದ ದರ ಎಷ್ಟಾಗಿದೆ? ಹಬ್ಬಕ್ಕೆ ಬಂಗಾರ ಬೆಲೆ ಏರಿಕೆನಾ, ಇಳಿಕೆಯಾ?

PREV
16
ಮಕರ ಸಂಕ್ರಾಂತಿ ಹಿನ್ನಲೆಯಲ್ಲಿ ಬಂಗಾರ ಬೆಲೆ

ಮಕರ ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದೆ. ಹಿಂದೂಗಳು ಪವಿತ್ರ ಹಬ್ಬ ಆಚರಿಸಲು ತಯಾರಿ ನಡೆಸುತ್ತಿದ್ದಾರೆ. ಮಕರ ಸಂಕ್ರಾತಿ, ಪೊಂಗಲ್, ಮಾಘ ಬಿಹು ಸೇರಿದಂತೆ ಹಲವು ರೂಪದಲ್ಲಿ ಹಬ್ಬ ಆಚರಿಸಲಾಗುತ್ತದೆ. ಆದರೆ ಮಕರ ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದ್ದಂತೆ ಬಂಗಾರಗ ಬೆಲೆ ಏರಿಕೆಯಾಗ ತೊಡಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಾಣುತ್ತಿದೆ.ಈಗಾಗಲೇ ದುಬಾರಿಯಾಗಿರುವ ಚಿನ್ನ ಇದೀಗ ಮತ್ತಷ್ಟು ದುಬಾರಿಯಾಗಿದೆ.

26
ಶೇಕಡಾ 4ರಷ್ಟು ಹೆಚ್ಚಳ

ಶನಿವಾರ (ಜ.10) ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿದೆ. ಜನವರಿ ತಿಂಗಳಲ್ಲೇ ಇದೀಗ ಶೇಕಡಾ 4ರಷ್ಟು ಚಿನ್ನದ ಬೆಲೆ ಏರಿಕೆಯಾಗಿದೆ. ಇತ್ತ ಬೆಳ್ಳಿ ಬೆಲೆಯಲ್ಲೂ ಏರಿಕೆ ಕಾಣಲು ಆರಂಭಿಸಿದೆ. ಕೆಲ ದಿನಗಳಿಂದ ಇಳಿಕೆಯಲ್ಲಿದ್ದ ಬೆಳ್ಳಿ ಬೆಲೆ ಹಬ್ಬ ಸಮೀಪಿಸುತ್ತಿದ್ದಂತೆ ಏರಿಕೆಯಾಗಿದೆ.

36
ಇಂದು ಚಿನ್ನದ ಬೆಲೆ

ಇಂದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,150 ರೂಪಾಯಿ ಏರಿಕೆಯಾಗಿದೆ. ಸದ್ಯ 10 ಗ್ರಾಂಗೆ 1,40,460 ರೂಪಾಯಿಗೆ ತಲುಪಿದೆ. ಸದ್ಯ 1 ಗ್ರಾಂ 24 ಕ್ಯಾರಟ್ ಚಿನ್ನದ ದರ 14,046 ರೂಪಾಯಿಗೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 10 ಗ್ರಾಂಗೆ 1,050 ರೂಪಾಯಿ ಏರಿಕೆಯಾಗಿದೆ. ಸದ್ಯ 10 ಗ್ರಾಂಗೆ 1,28,750 ರೂಪಾಯಿ ಆಗಿದೆ. 1 ಗ್ರಾಂಗೆ 12,875 ರೂಪಾಯ ಆಗಿದೆ.

46
ಜನಸಾಮಾನ್ಯರ ಕೈಗೆಟುಕದ ಚಿನ್ನ

ಚಿನ್ನದ ಬೆಲೆ ದುಬಾರಿಯಾಗಿರುವ ಹಿನ್ನಲೆಯಲ್ಲಿ ಜನಸಾಮಾನ್ಯರ ಕೈಗೆ ಸಿಗದಂತಾಗಿದೆ. 18 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 860 ರೂಪಾಯಿ ಏರಿಕೆಯಾಗಿದೆ. ಸದ್ಯ 10 ಗ್ರಾಂ ಚಿನ್ನಕ್ಕೆ 1,05,340 ರೂಪಾಯಿ ಆಗಿದೆ. 18 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 10,534 ರೂಪಾಯಿ ಆಗಿದೆ.

56
ಸಂಕ್ರಾಂತಿ ಹಬ್ಬಕ್ಕೆ ಚಿನ್ನ ಬೆಳ್ಳಿ ಬೆಲೆ ಮತ್ತಷ್ಟು ಏರಿಕೆ

ಸಂಕ್ರಾಂತಿ ಹಬ್ಬಕ್ಕೆ ಚಿನ್ನ ಹಾಗೂ ಬೆಳ್ಳಿ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಒಂದೆಡೆ ಸಂಕ್ರಾಂತಿ ಹಬ್ಬಕ್ಕೆ ಚಿನ್ನ ಹಾಗೂ ಬೆಳ್ಳಿ ಬೇಡಿಕೆಯೂ ಹೆಚ್ಚಾಗಲಿದೆ. ಪ್ರಮುಖವಾಗಿ ಅಂತಾರಾಷ್ಟ್ರೀಯ ಚಿನ್ನದ ಮಾರುಕಟ್ಟೆ (ಎಂಸಿಎಕ್ಸ್) ಆಗುವ ಮಹತ್ವದ ಬದಲಾವಣೆಗಳು ಚಿನ್ನದ ದರದ ಮೇಲೆ ಪರಿಣಾಮ ಬೀರಲಿದೆ.

ಸಂಕ್ರಾಂತಿ ಹಬ್ಬಕ್ಕೆ ಚಿನ್ನ ಬೆಳ್ಳಿ ಬೆಲೆ ಮತ್ತಷ್ಟು ಏರಿಕೆ

66
ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ಮೌಲ್ಯ ಮತ್ತಷ್ಟು ಗಟ್ಟಿಗೊಳ್ಳುತ್ತಿರುವ ಹಿನ್ನಲೆಯಲ್ಲಿ ಚಿನ್ನದ ದರದಲ್ಲೂ ಏರಿಕೆಯಾಗುತ್ತಿದೆ. ಇತ್ತ ಭಾರತೀಯ ಮಾರುಕಟ್ಟೆಯಲ್ಲಿ ಮಕರ ಸಂಕ್ರಾಂತಿಯಿಂದ ದೇಶಿಯ ಚಿನ್ನದ ಬೇಡಿಕೆ ಹೆಚ್ಚಾಗಲಿದೆ. ಹಬ್ಬ, ಮದುವೆ ಸೇರಿದಂತೆ ಸಾಲು ಸಾಲು ಕಾರ್ಯಕ್ರಮಗಳಿಂದ ಭಾರತದಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಲಿದೆ. ಹೀಗಾಗಿ ದೇಶಿಯ ಮಾರುಕಟ್ಟೆಲ್ಲಿ ಬಂಗಾರ ಬೆಲೆ ದುಬಾರಿಯಾಗಲಿದೆ.

ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆ

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Photos on
click me!

Recommended Stories