ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ?

Published : Jun 08, 2026, 11:23 AM IST

Gold Rate Today in Bengaluru: ಆಭರಣ ಖರೀದಿಸುವವರಿಗೆ ವಾರದ ಮೊದಲ ದಿನವಾದ ಸೋಮವಾರವೂ ಗುಡ್‌ ನ್ಯೂಸ್ ಸಿಕ್ಕಿದೆ. ಜೂನ್ ತಿಂಗಳಿನಲ್ಲಿ ನಿರಂತವಾಗಿ ಇಳಿಕೆಯಾಗುತ್ತಿರುವ ಚಿನ್ನದ ಬೆಲೆ ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಜೂನ್ 8ರಂದು ಚಿನ್ನದ ಬೆಲೆ ಎಷ್ಟಿದೆ ನೋಡೋಣ ಬನ್ನಿ. 

PREV
16
ಯುದ್ದ ಭೀತಿಯ ನಡುವೆಯೂ ಆಭರಣ ಪ್ರಿಯರಿಗೆ ಗುಡ್ ನ್ಯೂಸ್

ಮೇ ತಿಂಗಳಿನಲ್ಲಿ ಏರುಗತಿಯಲ್ಲಿ ಸಾಗಿದ್ದ ಚಿನ್ನದ ಬೆಲೆ, ಯುಎಸ್-ಇರಾನ್ ಯುದ್ದದ ಭೀತಿಯ ನಡುವೆಯೂ ಜೂನ್ ತಿಂಗಳ ಆರಂಭದಿಂದಲೇ ನಿರಂತರವಾಗಿ ಇಳಿಕೆಯಾಗುತ್ತಾ ಸಾಗುತ್ತಿದೆ. ಇದು ಭಾರತದ ಸಾಮಾನ್ಯ ವರ್ಗದ ಆಭರಣ ಖರೀದಿಸುವವರಿಗೆ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ.

26
ಚಿನ್ನದ ಬೆಲೆ ಇಳಿಕೆಗೆ ಕಾರಣ

ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳು, ಕಚ್ಚಾ ತೈಲ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವುದು, ಹಣದುಬ್ಬರದ ಅಪಾಯಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಬಡ್ಡಿದರ ಸಿಗುವ ಕಡೆ ಹೂಡಿಕೆ ಮಾಡುತ್ತಿದ್ದಾರೆ. ಇದು ಚಿನ್ನದ ಬೆಲೆಯ ಕುಸಿತಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.

36
24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 10 ಗ್ರಾಮ್‌ಗೆ 1040 ರುಪಾಯಿ ಕುಸಿತ

ಇದೀಗ ಸೋಮವಾರದಂದು ಒಂದೇ ದಿನ 24 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,040 ರುಪಾಯಿ ಕುಸಿತವಾಗಿದೆ. ಈ ಮೂಲಕ ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 15,169 ರುಪಾಯಿಗೆ ಬಂದು ನಿಂತಿದೆ.

46
22 ಕ್ಯಾರಟ್ ಚಿನ್ನದ ಬೆಲೆಯಲ್ಲಿ 10 ಗ್ರಾಮ್‌ಗೆ 950 ರುಪಾಯಿ ಕುಸಿತ

ಇನ್ನೊಂದೆಡೆ 22 ಕ್ಯಾರಟ್ ಚಿನ್ನದ ಬೆಲೆಯಲ್ಲೂ ಕುಸಿತ ಕಂಡಿದೆ. ಇದೀಗ 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ ಇಂದು ಬರೋಬ್ಬರಿ 950 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಒಂದು ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 13,905 ರುಪಾಯಿಗೆ ಬಂದು ನಿಂತಿದೆ.

56
ಕಳೆದ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಒಟ್ಟಿನಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿರುವುದು ಸಾಮಾನ್ಯ ಮಧ್ಯಮ ವರ್ಗದ ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಬರೋಬ್ಬರಿ 5350 ರುಪಾಯಿ ಇಳಿಕೆಯಾಗಿದೆ. ಇನ್ನು 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ ಕಳೆದ 10 ದಿನಗಳಲ್ಲಿ 4900 ರುಪಾಯಿ ಇಳಿಕೆಯಾಗಿದೆ.

66
ಬೆಳ್ಳಿ ಬೆಲೆಯಲ್ಲಿ 5000 ರುಪಾಯಿ ಕುಸಿತ

ಇನ್ನು ಚಿನ್ನದ ಜತೆಜತೆಗೆ ಬೆಳ್ಳಿಯ ಬೆಲೆಯಲ್ಲೂ ಕೊಂಚ ಇಳಿಕೆಯಾಗಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ ಐದು ಸಾವಿರ ರುಪಾಯಿ ಇಳಿಕೆಯಾಗಿದ್ದು, ಒಂದು ಕೆಜಿಯ ಬೆಳ್ಳಿಯ ಬೆಲೆ 2,60,000 ರುಪಾಯಿಗಳಾಗಿದೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Photos on
click me!

Recommended Stories