ಷೇರುಪೇಟೆಯ ಕುಸಿತದ ನಡುವೆಯೂ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಕಳೆದ ಐದು ದಿನಗಳಿಂದ ಚಿನ್ನದ ಬೆಲೆ ಹಂತ ಹಂತವಾಗಿ ಇಳಿಕೆಯಾಗಿದೆ. ಏಪ್ರಿಲ್ 6ರಂದು ಮಾತ್ರ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ.
28
ಚಿನ್ನ ಖರೀದಿಸಲು ಇದು ಸುವರ್ಣವಕಾಶವಾಗಿದೆ. ಕಳೆದ ಐದು ದಿನಗಳಲ್ಲಿ ನಿಮಗೆ 10 ಗ್ರಾಂ ಚಿನ್ನದ ಮೇಲೆ ಕೊಂಚ ಹಣ ಉಳಿತಾಯವಾಗುತ್ತದೆ. ಇಂದು ದೇಶದಲ್ಲಿ 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಮತ್ತು 10 ಗ್ರಾಂ ಬೆಳ್ಳಿ ದರ ಎಷ್ಟಿದೆ ಎಂದು ನೋಡೋಣ ಬನ್ನಿ.
ಇಂದು ದೇಶದಲ್ಲಿ ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.
10 ಗ್ರಾಂ: 939 ರೂಪಾಯಿ
100 ಗ್ರಾಂ: 9,390 ರೂಪಾಯಿ
1000 ಗ್ರಾಂ: 93,900 ರೂಪಾಯಿ
78
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ.
88
ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.