ಕೊರೋನಾತಂಕದಿಂದ ಉದ್ಯಮಗಳು ನೆಲ ಕಚ್ಚಿವೆ. ಹೀಗಿರುವಾಗ ಗ್ರಾಹಕರು ಹಣವನ್ನು ಚಿನ್ನದಲ್ಲಿ ಹೂಡಿಕೆ ಮಾಡುತ್ತಿದ್ದಾರೆ.
undefined
ಚಿನ್ನದಲ್ಲಿ ಹಣ ಹೂಡಿಕೆ ಮಾಡುವ ಪರಿಣಾಮ ಬಂಗಾರಕ್ಕೆ ಬೇಡಿಕ ಕಡಿಮೆ ಇದ್ದರೂ ಬೆಲೆ ಮಾತ್ರ ದಿನೇ ದಿನೇ ಏರುತ್ತಿದೆ.
undefined
ಇಂದು ಸೋಮವಾರ ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಬೆಲೆ 48,510 ರೂಪಾಯಿ ಆಗಿದೆ.
undefined
ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 10 ರೂಪಾಯಿ ಏರಿಕೆ ಕಂಡಿದ್ದು, 52,910 ರೂಪಾಯಿ ಆಗಿದೆ.
undefined
ಇನ್ನು ಇತ್ತ ಇಳಿಕೆಯ ಹಾದಿಯಲ್ಲಿದ್ದ ಬೆಳ್ಳಿ ದರವೂ ಸದ್ಯ ಏರಿಕೆಯಾಗಿದೆ. ಒಂದು ಕೆ. ಜಿ ಬೆಳ್ಳಿಯ ಬೆಲೆ 1,200ರೂ. ಏರಿಕೆಯಾಗಿವ ಮೂಲಕ 69,500 ರೂಆಗಿದೆ.
undefined
ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ.
undefined
ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ.
undefined
ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.
undefined