ಗೋಲ್ಡ್‌ ರೇಟ್ ಇಳಿಕೆ, ಈಗ ಖರೀದಿಸೋದೆ ಉತ್ತಮ!

First Published Dec 22, 2020, 3:52 PM IST

ಏರಿಳಿತವಾಡುತ್ತಿದ್ದ ಚಿನ್ನದ ದರದಲ್ಲಿ ದಾಖಲೆಯ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ| ಹೀಗಿದೆ ನೋಡಿ ಡಿಸೆಂಬರ್ 22ರ ಗೋಲ್ಡ್ ರೇಟ್

ಭಾರತದಲ್ಲಿ ಅತಿ ಹೆಚ್ಚು ಸಡಗರದಿಂದ ಆಚರಿಸಲಾಗುವ ದೀಪಾವಳಿ ಹಬ್ಬ ಕೊನೆಗೊಂಡ ಬಳಿಕ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರ ನಿಧಾನವಾಗಿ ಏರಲಾರಂಭಿಸಿತ್ತು.
undefined
ಏರಿಳಿತವಾಡುತ್ತಿದ್ದ ಚಿನ್ನ ಗ್ರಾಹಕರನ್ನು ಖರೀದಿಸಬೇಕೋ? ಬೇಡವೋ ಎಂಬ ಗೊಂದಲಕ್ಕೆ ದೂಡಿತ್ತು.
undefined
ಆದರೀಗ ಮೂರ್ನಾಲ್ಕು ದಿನಗಳ ಬಳಿಕ ಚಿನ್ನದ ದರದಲ್ಲಿ ದಾಖಲೆಯ ಕುಸಿತವಾಗಿದ್ದು, ಖರೀದಿದಾರರನ್ನು ನಿರಾಳರನ್ನಾಗಿಸಿದೆ.
undefined
ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ 100ರೂ. ಕುಸಿದು 47,000 ರೂಪಾಯಿ ಆಗಿದೆ.
undefined
ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರದಲ್ಲೂ 110 ರೂ. ಇಳಿಕೆಯಾಗಿ 51,270 ರೂಪಾಯಿ ಆಗಿದೆ.
undefined
ಇನ್ನು ಇತ್ತ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆ. ಜಿ. ಬೆಳ್ಳಿ ದರದಲ್ಲಿ 67,600ರೂ ಆಗಿದೆ.
undefined
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.
undefined
ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.
undefined
click me!