ಭಾರತದಲ್ಲಿ ಅತಿ ಹೆಚ್ಚು ಸಡಗರದಿಂದ ಆಚರಿಸಲಾಗುವ ದೀಪಾವಳಿ ಹಬ್ಬ ಕೊನೆಗೊಂಡ ಬಳಿಕ ಭಾರೀ ಇಳಿಕೆ ಕಂಡಿದ್ದ ಚಿನ್ನದ ದರ ನಿಧಾನವಾಗಿ ಏರಲಾರಂಭಿಸಿತ್ತು.
ಏರಿಳಿತವಾಡುತ್ತಿದ್ದ ಚಿನ್ನ ಗ್ರಾಹಕರನ್ನು ಖರೀದಿಸಬೇಕೋ? ಬೇಡವೋ ಎಂಬ ಗೊಂದಲಕ್ಕೆ ದೂಡಿತ್ತು.
ಆದರೀಗ ಮೂರ್ನಾಲ್ಕು ದಿನಗಳ ಬಳಿಕ ಚಿನ್ನದ ದರದಲ್ಲಿ ದಾಖಲೆಯ ಕುಸಿತವಾಗಿದ್ದು, ಖರೀದಿದಾರರನ್ನು ನಿರಾಳರನ್ನಾಗಿಸಿದೆ.
ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ 400ರೂ. ಕುಸಿದು 46,600 ರೂಪಾಯಿ ಆಗಿದೆ.
ಇನ್ನು, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರದಲ್ಲೂ 440 ರೂ. ಇಳಿಕೆಯಾಗಿ 50,830 ರೂಪಾಯಿ ಆಗಿದೆ.
ಇನ್ನು ಇತ್ತ ಬೆಳ್ಳಿ ದರದಲ್ಲೂ 1,000ರೂ ಕುಸಿತವಾಗಿದ್ದು, ಯಾವುದೇ ಬದಲಾವಣೆಯಾಗಿಲ್ಲ. ಒಂದು ಕೆ. ಜಿ. ಬೆಳ್ಳಿ ದರ 66,600ರೂ ಆಗಿದೆ.
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.
ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.