ಖುಷಿ ಕೊಟ್ಟ ಚಿನ್ನದ ದರ, ಮತ್ತೆ ಇಳಿಕೆ!

First Published | Jan 24, 2021, 5:18 PM IST

ಏರಿಳಿತವಾಡುತ್ತಿದ್ದ ಚಿನ್ನದ ದರ ಮತ್ತೆ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ, ಬೆಳ್ಳಿಯೂ ಅಗ್ಗ| ಹೀಗಿದೆ ನೋಡಿ ಜನವರಿ 24ರ ಗೋಲ್ಡ್ ರೇಟ್

ದಿನೇ ದಿನೇ ಏರುತ್ತಿದ್ದ ಚಿನ್ನದ ದರ ಗ್ರಾಹಕರ ಚಿಂತೆಗೆ ಕಾರಣವಾಗಿತ್ತು.
ಆದರೀಗ ಬಂಗಾರ ದರ ಕುಸಿಯಲಾರಂಭಿಸಿದೆ.
Tap to resize

ಲಾಕ್‌ಡೌನ್ ಹೇರಿದಾಗಿನಿಂದಲೂ ಏರಿಳಿತ ಆಟವಾಡುತ್ತಿದ್ದ ಚಿನ್ನದ ದರದಿಂದ ಬೇಸತ್ತಿದ್ದ ಗ್ರಾಹಕರಿಗೆ ಈಗ ಕೊಂಚ ನೆಮ್ಮದಿಯಾಗಿದೆ
ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 10 ರೂ. ಇಳಿಕೆಯಾಗಿ ದರ 45,940 ರೂಪಾಯಿ ಆಗಿದೆ.
ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 10 ರೂ. ಇಳಿಕೆಯಾಗಿ 50,120 ರೂಪಾಯಿ ಆಗಿದೆ.
ಇನ್ನು ಇತ್ತ ಬೆಳ್ಳಿ ದರ ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 67,300ರೂ ಆಗಿದೆ.
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಜೊತೆಗೆ ಕೊರೋನಾ ವೈರಸ್ ರೂಪಾಂತರವೂ ಆಗುತ್ತಿದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.
ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ

Latest Videos

click me!