ವಾರೆವ್ಹಾ...! ಮತ್ತೆ ಇಳಿಯಿತು ಚಿನ್ನದ ದರ, ಬೆಳ್ಳಿ ಅಲ್ಪ ಏರಿಕೆ!

First Published | Oct 28, 2020, 4:54 PM IST

ಸಾಲು, ಸಾಲು ಹಬ್ಬ ಹಾಗೂ ಕೊರೋನಾ ಆತಂಕದ ನಡುವೆ  ಚಿನ್ನದ ದರ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಗ್ರಾಹಕರೂ ಫುಲ್ ಕನ್ಫ್ಯೂಸ್ ಆಗಿದ್ದಾರೆ. ಹೀಗಿರುವಾಗಲೇ ಗೋಲ್ಡ್ ರೇಟ್ ಕುಸಿದಿರುವ ವಿಚಾರ ಗ್ರಾಹರನ್ನು ಖುಷಿಯಾಗಿಸಿದೆ. ಇಲ್ಲಿದೆ ನೋಡಿ ಅ. 28ರ ದರ.

ಕೊರೋನಾತಂಕ ನಡುವೆ ಚಿನ್ನದ ಬೇಡಿಕೆ ಕಡಿಮೆ ಇದ್ದರೂ ಉದ್ಯಮಗಳು ನೆಲ ಕಚ್ಚಿದ ಪರಿಣಾಮ ಅನೇಕ ಮಂದಿ ಹಳದಿ ಲೋಹದಲ್ಲಿ ಹೂಡಿಕೆ ಮಾಡಿದ್ದರು. ಇದರ ಪರಿಣಾಮವೆಂಬಂತೆ ಬಂಗಾರ ದರ ಮಹಾಮಾರಿ ನಡುವೆಯೂ ಸಾರ್ವಕಾಲಿಕ ದಾಖಲೆ ಸೃಷ್ಟಿಸಿತ್ತು.
ಸದ್ಯ ಚಿನ್ನದ ಬೆಲೆಯಲ್ಲಿ ಏರಿಳಿತವಾಗತೊಡಗಿದ್ದು, ಗ್ರಾಹಕರಲ್ಲೂ ಖರೀದಿಸಬೇಕಾ? ಬೇಡವಾ? ಎಂಬ ಗೊಂದಲದಲ್ಲಿದ್ದರು. ಸದ್ಯ ಕಳೆದೆರಡು ದಿನದಿಂದ ಚಿನ್ನದ ದರ ಇಳಿಕೆ ಕಂಡಿದ್ದು ಗ್ರಾಹಕರನ್ನು ಹಿಗ್ಗುವಂತೆ ಮಾಡಿದೆ.
Tap to resize

ಇಂದು ಬೆಂಗಳೂರಿನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರದಲ್ಲಿ 140 ರೂಪಾಯಿ ಇಳಿಕೆಯಾಗಿದೆ. ಈ ಮೂಲಕ ಬೆಲೆ 47,730ರೂಪಾಯಿ ಆಗಿದೆ.
ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 160 ರೂಪಾಯಿ ಇಳಿಕೆ ಕಂಡಿದ್ದು, 52,060 ರೂಪಾಯಿ ಆಗಿದೆ.
ಇನ್ನು ಇತ್ತ ಬೆಳ್ಳಿ ದರ ಕೊಂಚ ಏರಿಕೆ ಕಂಡಿದ್ದು, 300 ರೂ. ಏರಿಕೆಯಾಗಿ, ಒಂದು ಕೆ. ಜಿ ಬೆಳ್ಳಿಯ ಬೆಲೆ 62,400 ರೂಆಗಿದೆ.
ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದ್ದಾರೆ. ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ.
ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದೀ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

Latest Videos

click me!