ಅಂತರರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವದಿಂದ ಚಿನ್ನ ಮತ್ತು ಬೆಳ್ಳಿ ದರಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿವೆ. ಈ ದಾಖಲೆಯ ಏರಿಕೆಯು ಮಧ್ಯಮ ವರ್ಗದವರಿಗೆ ಆಭರಣ ಖರೀದಿಯನ್ನು ಕಷ್ಟಕರವಾಗಿಸಿದ್ದು, ಹೂಡಿಕೆದಾರರು ಇದನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸುತ್ತಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆಗಳು, ಅನಿಶ್ಚಿತ ಜಾಗತಿಕ ಪರಿಸ್ಥಿತಿ, ರೂಪಾಯಿ ಮೌಲ್ಯ ಮತ್ತು ಸರ್ಕಾರದ ತೆರಿಗೆ ನೀತಿಗಳು ಚಿನ್ನ ಮತ್ತು ಬೆಳ್ಳಿ ದರದ ಮೇಲೆ ನೇರ ಪರಿಣಾಮ ಬೀರುತ್ತದೆ. ಇಂದು ಚಿನ್ನ ಮತ್ತು ಬೆಳ್ಳಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದ್ದು, ಮಧ್ಯಮವರ್ಗದರಿಗೆ ಹಳದಿ ಲೋಹ ಗಗಗನ ಕುಸುಮವಾಗಿದೆ.
27
ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟ
ಕಳೆದ ಕೆಲವು ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನದ ಬೆಲೆ ಇಂದು ಏರಿಕೆಯಾಗಿದ್ದು, ಗೃಹಿಣಿಯರು ಮತ್ತು ಹೂಡಿಕೆದಾರರನ್ನು ಬೆಚ್ಚಿಬೀಳಿಸಿದೆ. ಚಿನ್ನದಂತೆಯೇ ಬೆಳ್ಳಿಯ ಬೆಲೆಯೂ ಇಂದು ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಏರುತ್ತಿರುವುದರಿಂದ, ಮಧ್ಯಮ ವರ್ಗದವರು ಆಭರಣಗಳನ್ನು ಖರೀದಿಸುವುದನ್ನು ಹಿಂದೇಟು ಹಾಕುತ್ತಿದ್ದಾರೆ. ಆದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗಿರುವುದರಿಂದ ಅದರ ಮೇಲೆ ಆಸಕ್ತಿ ತೋರಿಸುತ್ತಲೇ ಇದ್ದಾರೆ. ಆದ್ದರಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯಾಗುತ್ತಾ ದಾಖಲೆಯನ್ನು ಬರೆಯುತ್ತಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.