ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಅತ್ಯಂತ ಶ್ರೀಮಂತ ರಾಜ್ಯ ಯಾವುದು? ಈ ಪಟ್ಟಿಯಲ್ಲಿ ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿದ್ದು, ಅರುಣಾಚಲ ಪ್ರದೇಶವು ಅತಿ ಕಡಿಮೆ ಆರ್ಥಿಕ ಉತ್ಪಾದನೆ ಹೊಂದಿದೆ.
ಭಾರತ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿದೆ. ಸುಮಾರು 1.4 ಶತಕೋಟಿ ಜನಸಂಖ್ಯೆ ಹೊಂದಿರುವ ಭಾರತದ ಜಿಡಿಪಿ ಬೆಳವಣಿಗೆ 2025-26 ರ ಹಣಕಾಸು ವರ್ಷದಲ್ಲಿ ಶೇ.7.4ರಷ್ಟಿದೆ ಎಂದು ಅಂದಾಜಿಸಲಾಗಿದೆ. ಜರ್ಮನಿಯನ್ನು ಹಿಂದಿಕ್ಕಿ $5.7 ಟ್ರಿಲಿಯನ್ ಜಿಡಿಪಿಯೊಂದಿಗೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿ ಭಾರತ ಸಾಗುತ್ತಿದೆ.
27
ಬಡ ಮತ್ತು ಶ್ರೀಮಂತ ರಾಜ್ಯಗಳ ಪಟ್ಟಿ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ದೇಶದ ಬಡ ಮತ್ತು ಶ್ರೀಮಂತ ರಾಜ್ಯಗಳ ಪಟ್ಟಿಯನ್ನು ಬಿಡುಗಡೆಯಾಗಿದೆ. ಈ ಶ್ರೀಮಂತ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಉತ್ತರ ಪ್ರದೇಶ, ಗುಜರಾತ್ ಅಂತೂ ಇಲ್ಲ. ಶ್ರೀಮಂತ ರಾಜ್ಯಗಳ ಪಟ್ಟಿಯಲ್ಲಿ ದಕ್ಷಿಣದ ರಾಜ್ಯಗಳು ಪಾರುಪತ್ಯ ಹೊಂದಿವೆ.
ಈ ಶ್ರೇಯಾಂಕವು ರಾಜ್ಯಗಳನ್ನು ಅವುಗಳ ಆರ್ಥಿಕ ಉತ್ಪಾದನೆಯ ಪ್ರಕಾರ, ಪ್ರಸ್ತುತ ಬೆಲೆಗಳ ಆಧಾರದ ಮೇಲೆ ಅಂದಾಜಿಸಿ ಲೆಕ್ಕ ಹಾಕಲಾಗುತ್ತದೆ. ಈ ದತ್ತಾಂಶಗಳು ಭವಿಷ್ಯದಲ್ಲಿ ಆರ್ಥಿಕ ಚಟುವಟಿಕೆ ಎಲ್ಲಿ ಅತ್ಯಧಿಕವಾಗಿದೆ ಮತ್ತು ಎಲ್ಲಿ ಕಡಿಮೆಯಾಗಿದೆ ಎಂಬುದನ್ನು ಸೂಚಿಸಲು ಸಹಾಯ ಮಾಡುತ್ತದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.