ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗುವ ಸಾಧ್ಯತೆಯಿದ್ದು, ಸರ್ಕಾರ ಹೊಸ ಸಂಪರ್ಕ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ, ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿಯೂ ಬದಲಾವಣೆ ತರಲಾಗಿದ್ದು, OTP ಆಧಾರಿತ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ.
ಯುದ್ಧದ ಪರಿಣಾಮದಿಂದಾಗಿ ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿದೆ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಕಂಪನಿಗಳು ಬೆಲೆಯನ್ನು ಪರಿಷ್ಕೃತಗೊಳಿಸುತ್ತವೆ. ಮೇ 1ರಂದು ಎಲ್‌ಪಿಜಿ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
25
ಚುನಾವಣೆ ಫಲಿತಾಂಶ
ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಹಿನ್ನೆಲೆ ಬೆಲೆ ಏರಿಕೆಯನ್ನು ತಡೆಹಿಡಿಯಲಾಗಿದೆ ಎನ್ನಲಾಗುತ್ತಿದೆ. ಮೇ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ನಂತರದ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್‌ಪಿಜಿ ಬೆಲೆಯೂ ಹೆಚ್ಚಳವಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿವೆ.
35
ಹೊಸ ಎಲ್‌ಪಿಜಿ ಗ್ಯಾಸ್ ಕನೆಕ್ಷನ್
ದೇಶದಲ್ಲಿ ಹೊಸ ಎಲ್‌ಪಿಜಿ ಗ್ಯಾಸ್ ಕನೆಕ್ಷನ್ ನೀಡುವುದನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸದ್ಯ ಅಸ್ತಿತ್ವದಲ್ಲಿರುವ ಗ್ರಾಹಕರ ಬೇಡಿಕೆಯನ್ನು ಪೂರೈಸುವತ್ತ ಕೆಲಸ ಮಾಡಲು ಪೆಟ್ರೋಲಿಯಂ ಸಚಿವಾಲಯ ನಿರ್ದೇಶನ ನೀಡಿದೆ. ಈ ಹಿನ್ನೆಲೆ ಮೇ ತಿಂಗಳಲ್ಲಯೂ ಹೊಸ ಗ್ರಾಹಕರಿಗೆ ಎಲ್‌ಪಿಜಿ ಸಂಪರ್ಕ ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.
ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಸರ್ಕಾರ ಬುಕಿಂಗ್ ನಿಯಮಗಳಲ್ಲಿಯೂ ಬದಲಾವಣೆಯನ್ನು ತಂದಿದೆ. ನಗರ ಪ್ರದೇಶದಲ್ಲಿ ರಿಫಿಲ್ಲಿಂಗ್ ಅವಧಿಯನ್ನು 25 ದಿನಕ್ಕೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 45 ದಿನಗಳ ಅಂತರವಿರಬೇಕು. ಈ ನಿಯಮದಿಂದ ಇನ್ನು ಮುಂದೆ ತ್ವರಿತವಾಗಿ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗಲ್ಲ.
55
ಪೂರೈಕೆಯಲ್ಲಿ ಪಾರದರ್ಶಕತೆ
ಪೂರೈಕೆಯಲ್ಲಿ ಪಾರದರ್ಶಕತೆ ತರಲು OTP ಆಧಾರಿತ ವಿತರಣಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಡ್ಡಾಯ ಮತ್ತು ಶಾಶ್ವತಗೊಳಿಸಲಾಗುತ್ತಿದೆ. ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮೂಲಕ ಬುಕ್ ಮಾಡಬೇಕು. ಕೋಡ್ ನೀಡಿದ ನಂತರವೇ ಸಿಲಿಂಡರ ವಿತರಣೆ ಮಾಡಲಾಗುತ್ತದೆ. ಇನ್ನು ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಲ್ಲಿ ಹೋಟೆಲ್‌ಗಳು ಎಲ್‌ಪಿಜಿ ಕೊರತೆಯನ್ನು ಅನುಭವಿಸುತ್ತಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.