ಬೆಳ್ಳಂ ಬೆಳಗ್ಗೆ ಬೆಲೆ ಏರಿಕೆ ಶಾಕ್' ಇಂದಿನಿಂದ ಗೃಹ ಬಳಕೆಯ LPG ಸಿಲಿಂಡರ್ ದರದಲ್ಲಿ 60 ರೂಪಾಯಿ ಹೆಚ್ಚಳ

Published : Mar 07, 2026, 08:45 AM IST

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ₹60 ರಷ್ಟು ಹೆಚ್ಚಿಸಲಾಗಿದ್ದು, ರಾಜ್ಯದಲ್ಲಿ ಹೊಸ ದರ ₹915 ಆಗಿದೆ. ವಾಣಿಜ್ಯ ಸಿಲಿಂಡರ್ ದರವೂ ₹115 ಏರಿಕೆಯಾಗಿದ್ದು, ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯೇ ಈ ಬೆಲೆ ಏರಿಕೆಗೆ ಕಾರಣವೆಂದು ವಿಶ್ಲೇಷಿಸಲಾಗಿದೆ.

PREV
14
₹60 ರೂಪಾಯಿ ಹೆಚ್ಚಳ

ಅಡುಗೆ ಅನಿಲದ ಬೆಲೆ ಗಗನಕ್ಕೇರಿದೆ. ಸರ್ಕಾರ ಗೃಹ ಬಳಕೆಯ ಸಿಲಿಂಡರ್ ಮೇಲೆ ₹60 ರೂಪಾಯಿ ಹೆಚ್ಚಿಸಿದೆ. ಇದರಿಂದಾಗಿ ರಾಜ್ಯದಲ್ಲಿ 14 ಕೆಜಿ ಒಂದು ಸಿಲಿಂಡರ್‌ನ ಹೊಸ ಬೆಲೆ ₹915 ಆಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಕೂಡಾ ₹115 ಹೆಚ್ಚಿಸಲಾಗಿದೆ. ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

24
ಅಡುಗೆ ಅನಿಲದ ಕೊರತೆ

ಇದೇ ವೇಳೆ ದೇಶದಲ್ಲಿ ಅಡುಗೆ ಅನಿಲದ ಕೊರತೆ ಉಂಟಾಗಲಿದೆ ಎಂಬ ಆತಂಕ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬೆಲೆ ಏರಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

34
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ

ಇರಾನ್-ಇಸ್ರೇಲ್ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಭಾರತದಾದ್ಯಂತ ದೇಶೀಯ ಅಡುಗೆ ಅನಿಲ ಬೆಲೆಗಳು ಏರಿಕೆಯಾಗಿವೆ.

44
ಬೆಲೆ ಏರಿಕೆ

ದೇಶದ ಎಲ್ಲಾ ತೈಲ ಸಂಸ್ಕರಣಾಗಾರಗಳು ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿತ್ತು. ಆದ್ರೂ ಇಂದು ಅಧಿಕೃತವಾಗಿ ಬೆಲೆ ಏರಿಕೆಯಾಗಿದೆ.

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Photos on
click me!

Recommended Stories