ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಅಮೆರಿಕಾದಲ್ಲಿ ಭಾರಿ ಮೊತ್ತದ ಹೂಡಿಕೆ ಮಾಡಿದೆ. ಟೆಕ್ಸಾಸ್‌ನಲ್ಲಿ $300 ಬಿಲಿಯನ್ ಮೌಲ್ಯದ ತೈಲ ಸಂಸ್ಕರಣಾಗಾರವನ್ನು ಸ್ಥಾಪಿಸುತ್ತಿದ್ದು,. ಕಳೆದ 50 ವರ್ಷಗಳಲ್ಲಿ ಅಮೆರಿಕಾದಲ್ಲಿ ನಿರ್ಮಾಣವಾಗುತ್ತಿರುವ ಮೊದಲ ಹೊಸ ಸಂಸ್ಕರಣಾಗಾರ ಇದಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್‌ನಿಂದ ಅಮೆರಿಕಾದಲ್ಲಿ ಭಾರಿ ಹೂಡಿಕೆ
ಭಾರತ ಮತ್ತು ಅದರ ಅತಿದೊಡ್ಡ ಖಾಸಗಿ ಇಂಧನ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್, ಅಮೆರಿಕಾದ ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ (ಸುಮಾರು ₹25.35 ಲಕ್ಷ ಕೋಟಿ) ಮೌಲ್ಯದ ತೈಲ ಸಂಸ್ಕರಣಾಗಾರವನ್ನು ಸ್ಥಾಪಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಟ್ರುತ್ ಸೋಶಿಯಲ್' ಖಾತೆಯ ಮೂಲಕ ಘೋಷಿಸಿದ್ದಾರೆ.
25
ಅಮೆರಿಕದಲ್ಲಿ ಮೊದಲ ಹೊಸ ತೈಲ ಸಂಸ್ಕರಣಾಗಾರ
50 ವರ್ಷಗಳಲ್ಲಿಯೇ ಅಮೆರಿಕದಲ್ಲಿ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ನಿರ್ಮಿಸಿದ್ದಕ್ಕಾಗಿ ಭಾರತ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಇದನ್ನು ಐತಿಹಾಸಿಕ ಹೂಡಿಕೆ ಎಂದು ಕರೆದಿರುವ ಟ್ರಂಪ್, ಇದು 'ಅಮೆರಿಕಾ ಮೊದಲು ನೀತಿಗೆ ಸಿಕ್ಕ ದೊಡ್ಡ ಗೆಲುವು ಎಂದು ಹೇಳಿದ್ದಾರೆ. ಈ ಯೋಜನೆಯ ಮೂಲಕ, ಅಮೆರಿಕ ಇಂಧನ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯವನ್ನು ಪುನಃ ಸ್ಥಾಪಿಸಲು ಬಯಸುತ್ತದೆ ಎಂದು ಅವರು ಹೇಳಿದ್ದಾರೆ.
35
$300 ಬಿಲಿಯನ್ ಮೌಲ್ಯದ ಒಪ್ಪಂದ
ಈ ಸಂಪೂರ್ಣ ಒಪ್ಪಂದವು $300 ಬಿಲಿಯನ್ ಮೌಲ್ಯದ್ದಾಗಿದೆ ಎಂದು ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮ ವೇದಿಕೆ 'ಟ್ರುತ್ ಸೋಷಿಯಲ್' ನಲ್ಲಿ ಘೋಷಿಸಿದ್ದಾರೆ. ಟೆಕ್ಸಾಸ್‌ನ ಬ್ರೌನ್ಸ್‌ವಿಲ್ಲೆಯಲ್ಲಿ ನಿರ್ಮಿಸಲಾಗುತ್ತಿರುವ ಈ ಸಂಸ್ಕರಣಾಗಾರವು $300 ಬಿಲಿಯನ್ ಡಾಲರ್ ಮೊತ್ತದ ಅತೀ ದೊಡ್ಡ ಒಪ್ಪಂದದ ಭಾಗವಾಗಿದೆ ಎಂದು ಅವರು ಬಹಿರಂಗಪಡಿಸಿದ್ದಾರೆ.
ಟ್ರಂಪ್ ಪ್ರಕಾರ ಇದು ಅಮೆರಿಕದ ಇತಿಹಾಸದಲ್ಲಿಯೇ ಅತಿ ದೊಡ್ಡ ಒಪ್ಪಂದವಾಗಿದೆ. ಆದರೆ, ಸಂಪೂರ್ಣ $300 ಬಿಲಿಯನ್ ಮೊತ್ತವು ಭಾರತದೊಂದಿಗಿನ ಒಪ್ಪಂದದ ಭಾಗವಾಗಿದೆಯೇ ಅಥವಾ ಇತರ ಪಾಲುದಾರರು ಸಹ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂಬುದು ಇನ್ನೂ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ
ಬ್ರೌನ್ಸ್‌ವಿಲ್ಲೆ ಬಂದರಿನಲ್ಲಿ ನಿರ್ಮಿಸಲಾಗುತ್ತಿರುವ ಈ ಸಂಸ್ಕರಣಾಗಾರವು ಅಮೆರಿಕದ ದೇಶೀಯ ಮಾರುಕಟ್ಟೆಯ ಅಗತ್ಯಗಳನ್ನು ಪೂರೈಸುವುದಲ್ಲದೆ ಜಾಗತಿಕ ರಫ್ತುಗಳನ್ನು ಹೆಚ್ಚಿಸುತ್ತದೆ ಎಂದು ಟ್ರಂಪ್ ಹೇಳಿದರು. ಇದು ವಿಶ್ವದ 'ಸ್ವಚ್ಛ' ಸಂಸ್ಕರಣಾಗಾರವಾಗಲಿದೆ ಎಂದು ಅವರು ಹೇಳಿಕೊಂಡರು. ಇದು ಅಮೆರಿಕದ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ದಕ್ಷಿಣ ಟೆಕ್ಸಾಸ್ ಪ್ರದೇಶದಲ್ಲಿ ಸಾವಿರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.
ಈ ಅದ್ಭುತ ಹೂಡಿಕೆಗಾಗಿ ಭಾರತದಲ್ಲಿನ ನಮ್ಮ ಪಾಲುದಾರರು ಮತ್ತು ಅವರ ಅತಿದೊಡ್ಡ ಖಾಸಗಿ ಇಂಧನ ಕಂಪನಿಯಾದ ರಿಲಯನ್ಸ್‌ಗೆ ಧನ್ಯವಾದಗಳು ಎಂದಿರುವ ಟ್ರಂಪಪ್ ತಮ್ಮ ಸರ್ಕಾರದ ನೀತಿಗಳನ್ನು ಶ್ಲಾಘಿಸಿದ್ದು, ತೆರಿಗೆ ಕಡಿತ ಮತ್ತು ಪರವಾನಗಿ ಪ್ರಕ್ರಿಯೆಯನ್ನು ಸರಳಗೊಳಿಸುವುದರಿಂದ ಮಾತ್ರ ಇಷ್ಟು ದೊಡ್ಡ ಹೂಡಿಕೆಗಳು ಅಮೆರಿಕಕ್ಕೆ ಮರಳುತ್ತಿವೆ ಎಂದು ಹೇಳಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.