ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ(Murugesh Nirani) ಮಾತನಾಡಿ, ಮಹಿಳೆಯರ ಉದ್ಯಮಕ್ಕೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲಿದೆ. ಮಹಿಳೆಯರಿಗಾಗಿ ಪ್ರತ್ಯೇಕ ಉದ್ಯಮ ಪಾರ್ಕ್ಗಳನ್ನು ಪ್ರಾರಂಭಿಸಲಿದೆ. ಕಲಬುರಗಿ, ಮೈಸೂರು, ಧಾರವಾಡ, ಹಾರೋಹಳ್ಳಿಯಲ್ಲಿ ಇವುಗಳು ತಲೆ ಎತ್ತಲಿವೆ. ದೇಶದಲ್ಲಿಯೇ ಮೊದಲ ಬಾರಿಗೆ ಮಹಿಳೆಯರಿಗಾಗಿ ಉದ್ಯಮ ಪಾರ್ಕ್‌ಗಳನ್ನು ಆರಂಭಿಸುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ(Karnataka) ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ರತ್ನಪ್ರಭ ಸೇರಿದಂತೆ ಇತರರು ಉಪಸ್ಥಿತರಿದ್ದರು.