Gold And Silver Price: ಅಂತರಾಷ್ಟ್ರೀಯ ವಿದ್ಯಮಾನಗಳಿಂದಾಗಿ ಚಿನ್ನದ ಬೆಲೆಯಲ್ಲಿ ಏರಿಳಿತಗಳುಂಟಾಗುತ್ತವೆ. ಮೇ 16ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂ. ಏರಿಕೆಯಾಗಿತ್ತು. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ.
ಅಂತರಾಷ್ಟ್ರೀಯ ವಿದ್ಯಮಾನಗಳಿಂದಾಗಿ ಚಿನ್ನದ ಬೆಲೆಯಲ್ಲಿ ಪ್ರತಿದಿನ ಏರಿಳಿತ ಉಂಟಾಗುತ್ತಿರುತ್ತದೆ. ಆದ್ದರಿಂದ ಚಿನ್ನ ಖರೀದಿ ಮಾಡುವ ಮುನ್ನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಇಂದು ದರ ನೋಡಿ ಚಿನ್ನಾಭರಣ ಪ್ರಿಯರು ನಿರಾಳರಾಗಿದ್ದಾರೆ.
28
ಮೇ 16ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂ.ಗಳಷ್ಟು ಏರಿಕೆಯಾಗಿತ್ತು. ಇಂದು ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ. ಚಿನ್ನದ ಖರೀದಿಗೆ ಹೋಗ್ತಿದ್ರೆ ಒಮ್ಮೆ ಬೆಲೆಯನ್ನು ಚೆಕ್ ಮಾಡ್ಕೊಳ್ಳಿ.
ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಾಗಿಲ್ಲ. ಚಿನ್ನದ ದರ ಸ್ಥಿರವಾಗಿದ್ದು, ನಿನ್ನೆಯ ಬೆಲೆಯಲ್ಲಿಯೇ ಖರೀದಿಸಬಹುದಾಗಿದೆ. ಮೇ 14ರಂದು ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿತ್ತು. 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,130 ರೂ.ವರೆಗೂ ಕಡಿಮೆಯಾಗಿತ್ತು.
88
ದೇಶದಲ್ಲಿಂದು ಬೆಳ್ಳಿ ಬೆಲೆ
ಇಂದು ದೇಶದಲ್ಲಿ ಚಿನ್ನದ ಜೊತೆ ಬೆಳ್ಳಿ ದರದಲ್ಲಿಯೂ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ.
10 ಗ್ರಾಂ: 970 ರೂಪಾಯಿ
100 ಗ್ರಾಂ: 9,700 ರೂಪಾಯಿ
1,000 ಗ್ರಾಂ: 97,000 ರೂಪಾಯಿ