ಬಿಜೆಪಿ ನಾಯಕ ಎಂಟಿಬಿ ನಾಗರಾಜ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಗ್ಗರಿಸಿ ರಾಜಕೀಯದಿಂದ ಕೊಂಚ ದೂರ ಉಳಿದಿದ್ದಾರೆ. ಆದರೆ ಹೊಸಕೋಟೆ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ಬಳಿ ಅತ್ಯಂತ ದುಬಾರಿ ಕಾರುಗಳಿವೆ.
2023ರ ವಿಧಾನಸಭಾ ಚುನಾವಣೆ ವೇಳೆ ಎಂಟಿಬಿ ನಾಗರಾಜ್ ತಮ್ಮ ಆಸ್ತಿ ಬರೋಬ್ಬರಿ 1607 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ನಾಗರಾಜ್ ಬಳಿ ರೋಲ್ಸ್ ರಾಯ್ಸ್ ಸೇರಿದಂತೆ ಅತ್ಯಂತ ದುಬಾರಿ ಕಾರುಗಳಿವೆ.
ಇದೀಗ ಎಂಟಿಬಿ ನಾಗರಾಜ್ ಹೊಚ್ಚ ಹೊಸ BMW XM ಕಾರು ಖರೀದಿಸಿದ್ದಾರೆ. ಅತ್ಯಂತ ಆಕರ್ಷಕ, ಅತ್ಯುತ್ತಮ ಪರ್ಫಾಮೆನ್ಸ್ ಸೇರಿದಂತೆ ಹಲವು ವಿಶೇಷತೆಗಳು ಈ ಕಾರಿನಲ್ಲಿದೆ.
ಈ ಕಾರಿನ ಆರಂಭಿಕ ಬೆಲೆ 2.60 ಕೋಟಿ ರೂಪಾಯಿ(ಎಕ್ಸ್ ಶೋ ರೂಂ). BMW XM ಕಾರಿನ ಟಾಪ್ ಮಾಡೆಲ್ ಆನ್ ರೋಡ್ ಬೆಲೆ ಸರಿಸುಮಾರು 3.5 ಕೋಟಿ ರೂಪಾಯಿ.
ಈ ಕಾರಿನ ಪ್ರಮುಖ ಆಕರ್ಷಣೆ ಎಂದರೆ ಒಂದು ಲೀಟರ್ ಪೆಟ್ರೋಲ್‌ಗೆ ಬರೋಬ್ಬರಿ 62 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಕಾರಣ ಇದು ಹೈಬ್ರಿಡ್ ಎಂಜಿನ್ ಕಾರು.
ಪೆಟ್ರೋಲ್ ಟ್ಯಾಂಕ್ ಹಾಗೂ ಚಾರ್ಜಿಂಗ್ ಸಾಕೆಟ್ ಎರಡು ಪ್ರತ್ಯೇಕವಾಗಿದೆ. ಅತ್ಯಾಧುನಿಕ ತಂತ್ರಜ್ಞಾನದ ಈ ಕಾರಿನ ಹೈಬ್ರಿಡ್ ಸಿಸ್ಟಮ್‌ನಿಂದ ಒಂದು ಲೀಟರ್ ಪೆಟ್ರೋಲ್‌ನಲ್ಲಿ 61.9 ಕಿಲೋಮೀಟರ್ ಮೈಲೇಜ್ ನೀಡುತ್ತದೆ.
4.4 ಲೀಟರ್ ಟ್ವಿನ್ ಟರ್ಬೋಚಾರ್ಜ್ ಪೆಟ್ರೋಲ್ ಎಂಜಿನ್ ಹೊಂದಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ. 653 PS ಪವರ್ ಹಾಗೂ 800 Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದೆ. ಹೀಗಾಗಿ ಇದರ ಪರ್ಫಾಮೆನ್ಸ್‌ಗೆ ಸರಿಸಾಟಿ ಇಲ್ಲ.
8 ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಶನ್ ಹೊಂದಿರುವ SUV ಕಾರು, 0-100 ಕಿಲೋಮೀಟರ್ ವೇಗವನ್ನು ಕೇವಲ 4.3 ಸೆಕೆಂಡ್‌ನಲ್ಲಿ ಪಡೆದುಕೊಳ್ಳಲಿದೆ. 2WD ಹಾಗೂ 4WD ಡ್ರೈವ್ ಮೊಡ್ ಆಯ್ಕೆ ಲಭ್ಯವಿದೆ.