ಬಾಲಿವುಡ್‌ನ ಸ್ಟಾರ್ ನಟ ಅಕ್ಷಯ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳಲ್ಲಿ ಸಖತ್ ಬ್ಯುಸಿ ಇರುವ ಅಕ್ಷಯ್ ಕುಮಾರ್ ಫಿಟ್ನೆಸ್ ಕಡೆಯೂ ಅಷ್ಟೆ ಗಮನ ಹರಿಸುತ್ತಾರೆ. ಬಾಲಿವುಡ್‌ನ ಫಿಟ್ ಅಂಡ ಫೈನ್ ನಟರಲ್ಲಿ ಒಬ್ಬರಾಗಿದ್ದಾರೆ.
54 ವರ್ಷದ ಅಕ್ಷಯ್ ಕುಮಾರ್ ಇಂದಿಗೂ 25ರಂತೆ ಕಾಣುತ್ತಾರೆ. ಇದಕ್ಕೆ ಕಾರಣ ಅವರ ಫಿಟ್ನೆಸ್. ಯಾವ ಯುವ ಕಲಾವಿದರಿಗೂ ಕಮ್ಮಿ ಇಲ್ಲ ಎನ್ನುವ ಹಾಗೆ ಫಿಟ್ನೆಸ್ ಕಾಪಾಡಿಕೊಂಡು ಬಂದಿದ್ದಾರೆ.
ಭಾನುವಾರ ಬೆಳ್ಳಗ್ಗೆ ಅಕ್ಷಯ್ ಕುಮಾರ್ ಮುಂಬೈ ರಸ್ತೆಯಲ್ಲಿ ಸೈಕ್ಲಿಂಗ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದರು. ಮುಂಬೈ ಪೊಲೀಸರು ಆಯೋಜಿಸಿದ್ದ ಮರಿನ್ ಡ್ರೈವ್ ಈವೆಂಟ್‌ನಲ್ಲಿ ಭಾಗಿಯಾಗಿದ್ದ ಅಕ್ಷಯ್ ಕುಮಾರ್ ಸೈಕ್ಲಿಂಗ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಸೈಕ್ಲಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಕ್ಷಯ್ ಕುಮಾರ್ ಸೈಕ್ಲಿಂಗ್ ಫೋಟೋ ನೋಡಿದ ನೆಟಿಗರು ಕಾಲೆಳೆಯುತ್ತಿದ್ದಾರೆ. 'ಗುಟ್ಕಾ ತಿಂದರೂ ಇಷ್ಟೊಂದು ಫಿಟ್ ಆಗಿದ್ದಾರೆ' ಎಂದು ಟ್ರೋಲ್ ಮಾಡಲಾಗುತ್ತಿದೆ.
ಅಂದಹಾಗೆ ಅಕ್ಷಯ್ ಕುಮಾರ್ ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಭಾರಿ ವಿರೋಧದ ಬಳಿಕ ಅಕ್ಷಯ್ ಕುಮಾರ್ ಇನ್ಮುಂದೆ ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿಕೆ ಬಿಡುಗಡೆ ಮಾಡಿದರು.
ಈ ಹಿನ್ನಲೆಯಲ್ಲಿ ನೆಟ್ಟಿಗರು ಅಕ್ಷಯ್ ಕುಮಾರ್ ಅವರನ್ನು ಕಾಲೆಳೆಯುತ್ತಿದ್ದಾರೆ. ಬೋಲೋ ಜುಬಾನ್ ಕೇಸರಿ, ವಿಮಲ್ ತೆಗೆದುಕೊಂಡಿರೋ ಇಲ್ವೋ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.
ಅಕ್ಷಯ್ ಕುಮಾರ್ ಬಳಿ ಸಾಲು ಸಾಲು ಸಿನಿಮಾಗಳಿವೆ. ಅಕ್ಷಯ್ ಕೊನೆಯದಾಗಿ ಪೃಥ್ವಿರಾಜ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಯ ಕಮಾಯಿ ಮಾಡುಲ್ಲಿ ವಿಫಲವಾಗಿದೆ. ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್‌ಗೆ ನಾಯಕಿಯಾಗಿ ಮಾನುಷಿ ಚಿಲ್ಲರ್ ಕಾಣಿಸಿಕೊಂಡಿದ್ದರು.