ಮೊದಲ ಭಾಗದ ನಟರೇ ಜೈಲರ್-2 ಭಾಗದಲ್ಲೂ ನಟಿಸುವ ಸಾಧ್ಯತೆ ಇದೆ. ಆದರೆ ಕಥೆಗೆ ತಕ್ಕಂತೆ ಕೆಲವು ಬದಲಾವಣೆಗಳೂ ಆಗಬಹುದು. ಮೋಹನ್ ಲಾಲ್, ಶಿವ ರಾಜ್ ಕುಮಾರ್ ಪಾತ್ರಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಒಂದು ಮುಖ್ಯ ಅಪ್ಡೇಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ನಟ ಶಿವರಾಜ್ ಕುಮಾರ್ ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಜಾಗದಲ್ಲಿ 'ಜೈಲರ್ 2' ಚಿತ್ರದಲ್ಲಿ ತೆಲುಗು ಸ್ಟಾರ್ ಬಾಲಕೃಷ್ಣ ಅವರನ್ನು ನಟಿಸುವಂತೆ ನೆಲ್ಸನ್ ದಿಲೀಪ್ ಕುಮಾರ್ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಇದು ನಿಜವಾದರೆ, ಸಿನಿಪ್ರಿಯರಿಗೆ ಹಬ್ಬ. ಈ ಸಿನಿಮಾ ಎಲ್ಲಿಗೆ ಹೋಗುತ್ತದೆ ಎಂದು ಊಹಿಸುವುದೂ ಕಷ್ಟ.