ಅರವತ್ತು ದಾಟಿದ್ರೂ ನಾಗಾರ್ಜುನ 30ರ ಹರೆಯದ ಹುಡುಗನಂತೆ ಕಾಣುತ್ತಾರೆ. ಕಳೆದ ಮೂವತ್ತು ವರ್ಷಗಳಿಂದ ತಮ್ಮ ದೇಹವನ್ನು ಚೆನ್ನಾಗಿಟ್ಟುಕೊಂಡಿದ್ದಾರೆ. ಯುವ ನಟರಿಗೂ ಪೈಪೋಟಿ ನೀಡುತ್ತಿದ್ದಾರೆ. ತಮ್ಮ ಆಹಾರ ಪದ್ಧತಿಯ ಬಗ್ಗೆ ಹೇಳುತ್ತಾ, ನಾನು ಎಲ್ಲವನ್ನೂ ತಿನ್ನುತ್ತೇನೆ, ಆದರೆ ರಾತ್ರಿ ಮಲಗುವ ಮುನ್ನ ಎಲ್ಲವನ್ನೂ ಮುಗಿಸುತ್ತೇನೆ ಎಂದು ಹೇಳಿದ್ದಾರೆ. ವೈನ್ ಕೂಡ ಸ್ವಲ್ಪ ಕುಡಿಯುತ್ತೇನೆ, ಮಾಂಸಾಹಾರದ ಜೊತೆಗೆ ಸಸ್ಯಾಹಾರವನ್ನೂ ಸೇವಿಸುತ್ತೇನೆ ಎಂದು ಹೇಳಿದ್ದಾರೆ. ನಾಟಿ ಕೋಳಿ ಅಂದ್ರೆ ತುಂಬಾ ಇಷ್ಟ ಎಂದಿದ್ದಾರೆ. ಅಷ್ಟೇ ಅಲ್ಲ, ರಾತ್ರಿ ಮಲಗುವ ಮುನ್ನ ಸ್ವಲ್ಪ ಸಿಹಿ ತಿನ್ನುತ್ತೇನೆ ಎಂದು ಹೇಳಿದ್ದಾರೆ.