1000 ಡ್ಯಾನ್ಸರ್ಸ್‌ ಜೊತೆಯಲ್ಲಿ ಮೈಸೂರಿನಲ್ಲಿ Peddy Movie ಶೂಟಿಂಗ್‌ ಮಾಡಿದ ಖ್ಯಾತ ನಟ Ram Charan

Published : Aug 27, 2025, 08:11 PM IST

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಚಿತ್ರತಂಡ ಗೌರಿ ಗಣೇಶ ಹಬ್ಬದ ನಡುವೆಯೇ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದೆ. 

PREV
15

ಮೈಸೂರಿನಲ್ಲಿ ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್‌ವೊಂದನ್ನು ಶೂಟಿಂಗ್ ನಡೆಸಲಾಗಿದೆ.

25

1000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕ್ತಿದ್ದು, ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯಾಗ್ರಾಫ್ ಮಾಡುತ್ತಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್ ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆಸಲಾಗುತ್ತಿದೆ.

35

ಉಪ್ಪೇನ ಸಿನಿಮಾ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರವೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

45

ಈ ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ನೀಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ನಡಿ ವೆಂಕಟ ಸತೀಶ್ ಕಿಲಾರು ಹಣ ಹಾಕುತ್ತಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಚಿತ್ರ ಪ್ರೆಸೆಂಟ್ ಮಾಡುತ್ತಿದೆ.

55

ಆರ್ ರತ್ನವೇಲು ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ನವೀನ್ ನೂಲಿ ಸಂಕಲನ‌ ಚಿತ್ರಕ್ಕಿದೆ. 2026ರ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆ ಆಗಲಿದೆ.

Read more Photos on
click me!

Recommended Stories