Mirai Movie: ತೇಜ್‌ ಸಜ್ಜಾ ನಟನೆಯ 'ಮಿರಾಯ್'‌ ಸಿನಿಮಾ ಟ್ರೇಲರ್‌ ರಿಲೀಸ್;‌ ಫ್ಯಾನ್ಸ್‌ಗೆ ವಿಶ್ಯುವಲ್‌ ಟ್ರೀಟ್

Published : Aug 28, 2025, 09:36 PM IST

ಹನುಮಾನ್ ಸಿನಿಮಾದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಿದ್ದ ತೇಜ ಸಜ್ಜಾ ಈಗ ಸೂಪರ್ ಯೋಧನಾಗಿ ಮತ್ತೆ ಎಂಟ್ರಿ‌ ಕೊಟ್ಟಿದ್ದಾರೆ. ಮಿರಾಯ್ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಪ್ರೇಕ್ಷಕರಿಗೆ ಭರ್ಜರಿ ವಿಷ್ಯುವಲ್ ಟ್ರೀಟ್ ನೀಡಿದ್ದಾರೆ.  

PREV
15

ಸೂಪರ್ ಯೋಧನಾಗಿ ಜನರನ್ನು ರಕ್ಷಿಸಲು ತೇಜ ಸಜ್ಜಾ ಹೋರಾಟ ಮಾಡ್ತಾರೆ. ಅವರ ವಿರುದ್ಧ ಮಂಚು ಮನೋಜ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಭರ್ಜರಿ ಆಕ್ಷನ್ ಜೊತೆಗೆ ಪುರಾಣದ ಕಥೆಯನ್ನು ಸೊಗಸಾಗಿ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಧರ್ಮ ರಕ್ಷಕನಾಗಿ ತೇಜ ಸಜ್ಜಾ ಹೋರಾಟ ನಡೆಸುತ್ತಾರೆ. ಟ್ರೇಲರ್ ಕೊನೆಯಲ್ಲಿ ಬರುವ ಭಗವಾನ್ ಶ್ರೀರಾಮ ಝಲಕ್ ಪ್ರೇಕ್ಷಕರಿಗೆ ರೋಮಾಂಚನ ನೀಡಲಿದೆ.

25

ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಮೀಡಿಯಾ ಫ್ಯಾಕ್ಟರಿಯಡಿ ಟಿ.ಜಿ.ವಿಶ್ವಪ್ರಸಾದ್ ಚಿತ್ರ ನಿರ್ಮಾಣ ಮಾಡಿದ್ದಾರೆ. ರಿತಿಕಾ ನಾಯಕ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

35

ಮಣಿಬಾಬು ಕರಣಂ ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶನ ಚಿತ್ರಕ್ಕಿದ್ದು, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರು. ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

45

ಸೆಪ್ಟೆಂಬರ್ 12ರಂದು ಮಿರಾಯ್ ಸಿನಿಮಾ 2D ಮತ್ತು 3D ಫಾರ್ಮಾಟ್ನಲ್ಲಿ ಏಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಕನ್ನಡದಲ್ಲಿ ಈ ಚಿತ್ರವನ್ನು ವಿಕೆ‌ ಫಿಲ್ಮ್ ಬ್ಯಾನರ್‌ನಡಿ ಹೊಂಬಾಳೆ ಫಿಲ್ಮ್ ರಿಲೀಸ್ ಮಾಡುತ್ತಿದೆ.

55

ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ಮಿರಾಯ್ಗೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories