ಅರ್ಧಂಬರ್ಧ ಬಟ್ಟೆಯಲ್ಲಿ ರಶ್ಮಿಕಾ ಮಿಂಚಿಂಗ್; ಬಾಲಿವುಡ್ ಸಹವಾಸ ಎಂದು ನೆಟ್ಟಿಗರ ಕ್ಲಾಸ್

Published : Jul 16, 2022, 03:23 PM ISTUpdated : Jul 16, 2022, 03:58 PM IST

ರಶ್ಮಿಕಾ ಮಂದಣ್ಣ ಸಿಕ್ಕಾಪಟ್ಟೆ ಹಾಟ್ ಆಗಿದ್ದಾರೆ. ಕೆಂಪು ಬಣ್ಣದ ಡ್ರೆಸ್ ನಲ್ಲಿ ಮಿಂಚಿರುವ ರಶ್ಮಿಕಾ ಅಭಿಮಾನಿಗಳ ನಿದ್ದೆ ಗೆಡಿಸಿದ್ದಾರೆ. ರಶ್ಮಿಕಾ ಹಾಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕ್ಯಾಮರಾ ಮುಂದೆ ತರಹೇವಾರಿ ಪೋಸ್ ನೀಡಿರುವ ರಶ್ಮಿಕಾ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.   

PREV
17
ಅರ್ಧಂಬರ್ಧ ಬಟ್ಟೆಯಲ್ಲಿ ರಶ್ಮಿಕಾ ಮಿಂಚಿಂಗ್; ಬಾಲಿವುಡ್ ಸಹವಾಸ ಎಂದು ನೆಟ್ಟಿಗರ ಕ್ಲಾಸ್

ನಟಿ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಬಳಿಕ ಬಾಲಿವುಡ್‌ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗುತ್ತಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸಿನಿಮಾ ರಿಲೀಸ್ ಆಗುವ ಮೊದಲೇ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ಅಧಿಕೃತವಾಗಿ ಮೂರು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ  ಇದೀಗ ಮೂರನೇ ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

27

ರಶ್ಮಿಕಾ ಸಿನಿಮಾ ಜೊತೆಗೆ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಾಗುತ್ತಾರೆ. ಇತ್ತೀಚಿಗಷ್ಟೆ ರಶ್ಮಿಕಾ ಇಂಡಿಯಾದ ಮೋಸ್ಟ್ ಸ್ಟೈಲಿಶ್ 2022 ಈವೆಂಟ್‌ನಲ್ಲಿ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ರಶ್ಮಿಕಾ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. 

37

ಸಿಕ್ಕಾಪಟ್ಟೆ ಹಾಟ್ ಆಗಿರುವ ರಶ್ಮಿಕಾ ಕೆಂಪು ಬಣ್ಣದ ಡ್ರೆಸ್ ನಲ್ಲಿ ಮಿಂಚಿದ್ದರು. ರಶ್ಮಿಕಾ ಹಾಟ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕ್ಯಾಮರಾ ಮುಂದೆ ತರಹೇವಾರಿ ಪೋಸ್ ನೀಡಿರುವ ರಶ್ಮಿಕಾ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. 

47

ಅಂದಹಾಗೆ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಕೂಡ ಭಾಗಿಯಾಗಿದ್ದರು. ರಶ್ಮಿಕಾ ಮತ್ತು ಅನುಪಮ್ ಖೇರ್ ರೆಡ್ ಕಾರ್ಪೆಟ್ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ. 

57

ಕಾರ್ಯಕ್ರಮದಲ್ಲಿ ಹಿರಿಯ ನಟ ಅನುಪಮ್ ಖೇರ್, ರಶ್ಮಿಕಾ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುವಂತೆ ಕೇಳಿದ್ದಾರೆ. ಅನುಪಮ್ ಖೇರ್ ಕೇಳಿದಕ್ಕೆ ಕಿರಿಕ್ ಪಾರ್ಟಿ ಸುಂದರಿ ನಾಚಿನೀರಾಗಿದ್ದಾರೆ. ರಶ್ಮಿಕಾ ಮತ್ತು ಅನುಪಮ್ ಖೇರ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

67

ರಶ್ಮಿಕಾ ಫೋಟೋಗಳಿಗೆ ಅಭಿಮಾನಿಗಳಿಂದ ತರಹೇವಾರಿ ಕಾಮೆಂಟ್ ಹರಿದುಬರುತ್ತಿದೆ. ಸಿಕ್ಕಾಪಟ್ಟೆ ಹಾಟ್ ರಶ್ಮಿಕಾರನ್ನು ಕೆಲವರು ಟ್ರೋಲ್ ಮಾಡುತ್ತಿದ್ದಾರೆ. ಇನ್ನು ಕೆಲವರು ಹಾಡಿಹೊಗಳುತ್ತಿದ್ದಾರೆ. ಏನೇ ಆದರೂ ರಶ್ಮಿಕಾ ಸೌತ್ ನಲ್ಲಿ ಮಿಂಚುವ ಜೊತೆಗೆ ಬಾಲಿವುಡ್ ನಲ್ಲೂ ಮಿಂಚುತ್ತಿದ್ದಾರೆ. 

77

ರಶ್ಮಿಕಾ ಸಿನಿಮಾ ವಿಚಾರಗಳ ಬಗ್ಗೆ ಹೇಳುವುದಾದರೆ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ನಟನೆಯ ಮಿಷನ್ ಮಜ್ನು, ಗುಡ್ ಬೈ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಮಿಷನ್ ಮಜ್ನು ಸಿನಿಮಾದಲ್ಲಿ ಸಿದ್ಧಾರ್ದ್ ಮಲ್ಹೋತ್ರ ನಾಯಕನಾಗಿ ನಟಿಸಿದ್ದಾರೆ.  ಗುಡ್ ಬೈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಜೊತೆ ನಟಿಸಿದ್ದಾರೆ. ಸದ್ಯ ರಶ್ಮಿಕಾ ಹಿಂದಿಯಲ್ಲಿ ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ನಟಿಸುತ್ತಿದ್ದಾರೆ. ಈ ಸಿನಿಮಾ ಬಳಿಕ ರಶ್ಮಿಕಾ ಬಹುನಿರೀಕ್ಷೆಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ.
 

Read more Photos on
click me!

Recommended Stories