ಭಾರತದ ಸಂಗೀತ ದಂತಕಥೆ ಸುಬ್ಬಲಕ್ಷ್ಮಿ ಬಯೋಪಿಕ್‌‌ನಲ್ಲಿ ರಾಮಾಯಣದ ಸೀತೆ: ಅಭಿಮಾನಿಗಳಲ್ಲಿ ಕುತೂಹಲ!

Published : Dec 17, 2025, 07:33 PM IST

ಗಾಯಕಿ ಎಂಎಸ್ ಸುಬ್ಬಲಕ್ಷ್ಮಿ ಅವರ ಪಾತ್ರದಲ್ಲಿ ನಟಿಸಲು ಸಾಯಿ ಪಲ್ಲವಿ ಒಪ್ಪಿಗೆ ನೀಡಿದ್ದಾರೆ. ಈ ಪಾತ್ರಕ್ಕಾಗಿ ವಿಶೇಷ ತಯಾರಿಯನ್ನೂ ಸಹ ಸಾಯಿ ಪಲ್ಲವಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

PREV
16
ಸುಬ್ಬಲಕ್ಷ್ಮಿ ಬಯೋಪಿಕ್‌‌ನಲ್ಲಿ ಸಾಯಿ ಪಲ್ಲವಿ

ಭಾರತದ ಶ್ರೇಷ್ಠ ಗಾಯಕಿ ಹಾಗೂ ದಂತಕಥೆ ಎಂ.ಎಸ್. ಸುಬ್ಬಲಕ್ಷ್ಮಿಅವರ ಜೀವನ ಚರಿತ್ರೆ ಆಧಾರಿತ ಚಿತ್ರದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಪ್ರಧಾನ ಪಾತ್ರದಲ್ಲಿ ನಟಿಸುವುದು ಬಹುತೇಕ ಖಚಿತವಾಗಿದೆ.

26
ಪ್ರೀ ಪ್ರೊಡಕ್ಷನ್ ಹಂತದಲ್ಲಿ

ಸದ್ಯ ಅಧಿಕೃತವಾಗಿ ಘೋಷಣೆಯಷ್ಟೇ ಬಾಕಿ ಇದೆ. ಈ ಚಿತ್ರವನ್ನು ಗೌತಮ್ ತಿನ್ನನುರಿ ನಿರ್ದೇಶಿಸಲಿದ್ದು, ಗೀತಾ ಆರ್ಟ್ಸ್ ಚಿತ್ರ ನಿರ್ಮಿಸಲಿದೆ. ಈ ಸಿನಿಮಾ ಪ್ರಸ್ತುತ ಪ್ರೀ ಪ್ರೊಡಕ್ಷನ್ ಹಂತದಲ್ಲಿದೆ.

36
ಶಾಸ್ತ್ರೀಯ ಸಂಗೀತದ ಮೇರು ಗಾಯಕಿ

ಸಾಯಿ ಪಲ್ಲವಿ, ಈಗಾಗಲೇ ತಮ್ಮ ನಟನೆಯಿಂದ ದೇಶದಾದ್ಯಂತ ಸಿನಿಮಾ ಪ್ರೇಮಿಗಳ ಮನಸ್ಸು ಗೆದ್ದಿದ್ದು, ಶಾಸ್ತ್ರೀಯ ಸಂಗೀತದ ಮೇರು ಗಾಯಕಿ ಎಂ.ಎಸ್ ಸುಬ್ಬಲಕ್ಷ್ಮಿ ಜೀವನಗಾಥೆಯ ಪಾತ್ರಕ್ಕಾಗಿ ಸಾಯಿ ಪಲ್ಲವಿ ನಟಿಸುತ್ತಿರುವುದು ವಿಶೇಷ.

46
ಪಾತ್ರಕ್ಕಾಗಿ ವಿಶೇಷ ತಯಾರಿ

ಎಂಎಸ್ ಸುಬ್ಬಲಕ್ಷ್ಮಿ ಅವರ ಪಾತ್ರದಲ್ಲಿ ನಟಿಸಲು ಸಾಯಿ ಪಲ್ಲವಿ ಒಪ್ಪಿಗೆ ನೀಡಿದ್ದಾರೆ. ಈ ಪಾತ್ರಕ್ಕಾಗಿ ವಿಶೇಷ ತಯಾರಿಯನ್ನೂ ಸಹ ಸಾಯಿ ಪಲ್ಲವಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

56
ಅಭಿಮಾನಿಗಳಲ್ಲಿ ಕುತೂಹಲ

ಈಗಾಗಲೇ ಅನೇಕ ಬಯೋಪಿಕ್ ಚಿತ್ರಗಳಲ್ಲಿ ನಟಿಸಿ ಪಾತ್ರಕ್ಕೆ ಜೀವ ತುಂಬಿರುವ ಸಾಯಿ ಪಲ್ಲವಿ ಇದೀಗ ಭಾರತದ ಸಂಗೀತ ಕ್ಷೇತ್ರದ ಧೀಮಂತೆಯ ಪಾತ್ರದಲ್ಲಿ ಹೇಗೆ ಕಾಣಿಸಿಕೊಳ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಮನೆಮಾಡಿದೆ.

66
ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ

ಎಂ.ಎಸ್ ಸುಬ್ಬಲಕ್ಷ್ಮಿ ಸಂಗೀತ ಕ್ಷೇತ್ರದಲ್ಲಿ ಭಾರತ ರತ್ನ ಪಡೆದ ಮೊದಲಿಗರು. 1966ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರದರ್ಶನ ನೀಡಿರುವುದು ಇತಿಹಾಸ. ಇನ್ನು ರಣ್​​ಬೀರ್ ಕಪೂರ್, ಯಶ್ ನಟಿಸುತ್ತಿರುವ ರಾಮಾಯಣ ಸಿನಿಮಾದಲ್ಲಿ ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ.

Read more Photos on
click me!

Recommended Stories