ಬಾಲಿವುಡ್ ಸ್ಟಾರ್ ನಟಿ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್ ಬ್ರಹ್ಮಾಸ್ತ್ರ ಸಿನಿಮಾದ ಸೂಪರ್ ಸಕ್ಸಸ್‌ನ ಸಂಭ್ರಮದಲ್ಲಿದ್ದಾರೆ. ಬ್ರಹ್ಮಾಸ್ತ್ರ ಬಾಯ್ಕಟ್ ಸಮಸ್ಯೆಗೆ ಸೆಡ್ಡು ಹೊಡೆದು ಬಾಕ್ಸ್ ಆಫೀಸ್‌ನಲ್ಲಿ ಗೆದ್ದು ಬೀಗಿದೆ. ಅಲಿಯಾ ಭಟ್, ರಣಬೀರ್ ಕಪೂರ್ ಮತ್ತು ಇಡೀ ತಂಡ ಸಿಕ್ಕಾಪಟ್ಟೆ ಪ್ರಮೋಷನ್ ಮಾಡಿತ್ತು. ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡಿದ್ದರು. ಅಂದಹಾಗೆ ಅಲಿಯಾ ಭಟ್ ಗರ್ಭಿಣಿ ಆದರೂ ಸಿನಿಮಾ ಪ್ರಮೋಶನ್ ನಲ್ಲಿ ಭಾಗಿಯಾಗಿದ್ದರು.