ನಟಿ ದೀಪಿಕಾ ಪಡುಕೋಣೆ ಸದ್ಯ ಬೇಷರಂ ರಂಗ್ ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ. ಈ ಹಾಡು ರಿಲೀಸ್ ಆಗುತ್ತಿದ್ದಂತೆ ದೊಡ್ಡ ವಿವಾದ ಸೃಷ್ಟಿ ಮಾಡಿದೆ. ಈ ಹಾಡನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ, ದೀಪಿಕಾ ಸಿಕ್ಕಾಪಟ್ಟೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ, ಕೇಸರಿ ಬಿಕಿನಿ ಧರಿಸಿ ನಾಚಿಕೆ ಇಲ್ಲದ ಬಣ್ಣ ಎಂದು ಹೇಳಿದ್ದಾರೆ ಅಂತ ದೀಪಿಕಾ ವಿರುದ್ಧ ನೆಟ್ಟಿಗರು ಮುಗಿಬಿದ್ದಿದ್ದಾರೆ. ಪಠಾಣ್ ಸಿನಿಮಾವನ್ನು ಬೈಕಾಟ್ ಮಾಡಬೇಕು ಎನ್ನುವ ಒತ್ತಾಯ ಕೇಳಿಬರುತ್ತಿದೆ.