ಹುಟ್ಟುಹಬ್ಬ ಆಚರಣೆಗೆ ಮಲೈಕಾ ಜೊತೆ ವಿದೇಶಕ್ಕೆ ಹಾರಿದ ಅರ್ಜುನ್; ಮದುವೆ ಯಾವಾಗ ಎಂದ ಫ್ಯಾನ್ಸ್

First Published Jun 24, 2022, 1:33 PM IST

ನಟ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ಜೋಡಿ ವಿದೇಶಕ್ಕೆ ಹಾರಿದೆ. ಏರ್ಪೋಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಈ ಜೋಡಿಯ ಫೋಟೋಗಳು ವೈರಲ್ ಆಗಿದೆ. ಅಂದಹಾಗೆ ಈ ಜೋಡಿ ದಿಢೀರ್ ವಿದೇಶಕ್ಕೆ ಹಾರಲು ಕಾರಣ ಹುಟ್ಟುಹಬ್ಬದ ಸಂಭ್ರಮಾಚರಣೆಗೆ. 

ಬಾಲಿವುಡ್ ನಟಿ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಪ್ರೀತಿಯ ಗುಟ್ಟಾಗಿ ಉಳಿದಿಲ್ಲ. ಮಲೈಕಾ ಪತಿ ಅರ್ಬಾಜ್ ಖಾನ್‌ಗೆ ವಿಚ್ಛೇದನ ನೀಡಿದ ಬಳಿಕ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ನಲ್ಲಿದ್ದಾರೆ. ಇಬ್ಬರು ಸದಾ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ. ಆದರೆ ಮದುವೆ ಬಗ್ಗೆ ಕೇಳಿದರೇ ಯಾವುದೇ ಪ್ರತಿಕ್ರಿಯೆ ನೀಡದೆ ನುಣುಚಿಕೊಳ್ಳುತ್ತಾರೆ. 

ಇದೀಗ ಈ ಜೋಡಿ ವಿದೇಶಕ್ಕೆ ಹಾರಿದೆ. ಏರ್ಪೋಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಈ ಜೋಡಿಯ ಫೋಟೋಗಳು ವೈರಲ್ ಆಗಿದೆ. ಅಂದಹಾಗೆ ಈ ಜೋಡಿ ದಿಢೀರ್ ವಿದೇಶಕ್ಕೆ ಹಾರಲು ಕಾರಣ ಹುಟ್ಟುಹಬ್ಬದ ಸಂಭ್ರಮಾಚರಣೆಗೆ. 

Arjun Kapoor

ಅರ್ಜುನ್ ಕಪೂರ್ 37ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬವನ್ನು ಅದ್ದೂರಿಯಾ ಗಿಆಚರಣೆ ಮಾಡಲು ಮಲೈಕಾ ಜೊತೆ ಫಾರಿನ್ ಟ್ರಿಪ್ ಹೊರಟಿದ್ದಾರೆ. ಅಂದಹಾಗೆ ಈ ಜೋಡಿ ಎಲ್ಲಿಗೆ ಹೋಗುತ್ತಿದ್ದಾರೆ ಎನ್ನುವ ಸುಳಿವು ನೀಡಿಲ್ಲ. 

ಇಬ್ಬರ ಫೋಟೋ ನೋಡಿ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಅಭಿಮಾನಿಯೊಬ್ಬ 'ಮದುವೆ ಯಾವಾಗ?' ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೋರ್ವ ಕಾಮೆಂಟ್ ಮಾಡಿ ನಿಮ್ಮನ್ನು ಒಟ್ಟಿಗೆ ನೋಡಿ ಖುಷಿಯಾಯಿತು ಎಂದು ಹೇಳಿದ್ದಾರೆ. 
 

ಅರ್ಜುನ್ ಕಪೂರ್ ಜೂನ್ 26ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. 37ನೇ ವರ್ಷದ ಹುಟ್ಟುಹಬ್ಬವನ್ನು ಗರ್ಲ್‌ಫ್ರೆಂಡ್ ಮಲೈಕಾ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ಮಲೈಕಾ ತನ್ನ ಬಾಯ್‌ಫ್ರೆಂಡ್ ಹುಟ್ಟುಹಬ್ಬಕ್ಕೆ ಎರಡು ದಿನಗಳ ಮುಂಚಿತವಾಗಿ ವಿದೇಶಕ್ಕೆ ಹಾರುವ ಮೂಲಕ ಭರ್ಜರಿ ಗಿಫ್ಟ್ ನೀಡಿದ್ದಾರೆ.   
 

ಅರ್ಜುನ್ ಕಪೂರ್ ಬಾಲಿವುಡ್‌ನಲ್ಲಿ 10 ವರ್ಷ ಪೂರೈಸಿದ್ದಾರೆ. ಇಶಾಕ್ ಜಾದೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾಗೆ 10 ವರ್ಷದ ಸಂಭ್ರಮ. ಸದ್ಯ ಅರ್ಜುನ್ ಕಪೂರ್ ಏಕ್ ವಿಲನ್ ರಿಟರ್ನ್ ಸಿನಿಮಾದಲ್ಲಿ ನಟಿಸಿದ್ದು ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೊತೆಗೆ ಇನ್ನು ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  
 

click me!