ಕನ್ನಡ ಚಿತ್ರರಂಗದ ಮೂಲಕ ಸಿನಿಮಾ ಪ್ರವೇಶಿಸಿದ ಕಿಸ್ ಖ್ಯಾತಿಯ ನಟಿ ಶ್ರೀಲೀಲಾ ಅವರು ಹೆಚ್ಚು ಖ್ಯಾತಿ ಸಿಗದೇ ತೆಲುಗಿನಲ್ಲೂ ನಟಿಸಿ, ಬಾಲಿವುಡ್ನತ್ತ ಮುಖ ಮಾಡಿದ್ದಾರೆ. ಸದ್ಯ ಶ್ರೀಲೀಲಾ ಬಾಲಿವುಡ್‌ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ.
25
ಇದೀಗ ಶ್ರೀಲೀಲಾಗೆ ಬಾಲಿವುಡ್ನಿಂದ ಮತ್ತೊಂದು ಬಿಗ್ ಆಫರ್ ಸಿಕ್ಕಿದೆ. ಹೌದು! ಹಿಂದಿಯ ಸ್ಟಾರ್ ಹೀರೋ ಜೊತೆ ನಟಿಸೋ ಆಫರ್ ಅವರಿಗೆ ಸಿಕ್ಕಿದೆ. ಇದನ್ನು ಅವರು ಖುಷಿಯಿಂದ ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ.
35
‘ಡ್ರೀಮ್ ಗರ್ಲ್’ ಖ್ಯಾತಿಯ ರಾಜ್ ಶಾಂಡಿಲ್ಯ ಅವರು ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಇದಕ್ಕೆ ಸಿದ್ದಾರ್ಥ್ ಮಲ್ಹೋತ್ರ ಅವರು ಹೀರೋ. ಈ ಚಿತ್ರಕ್ಕೆ ನಾಯಕಿಯ ಹುಡುಕಾಟ ನಡೆಯುತ್ತಿದೆ.
45
ಶ್ರೀಲೀಲಾ ಹಾಗೂ ನಟಿ ಅನನ್ಯಾ ಪಾಂಡೆ ಜೊತೆಯೂ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ. ಈ ಮೂಲಕ ನಟಿ ಶ್ರೀಲೀಲಾಗೆ ಬಾಲಿವುಡ್‌ನಲ್ಲಿ ಮತ್ತೊಂದು ದೊಡ್ಡ ಆಫರ್ ಒಂದು ಸಿಕ್ಕಂತೆ ಆಗಿದೆ.
55
ಇನ್ನು ಈ ಚಿತ್ರಕ್ಕೆ ಇಬ್ಬರು ನಾಯಕಿಯರು. ಈ ಕಾರಣಕ್ಕೆ ಶ್ರೀಲೀಲಾ ಹಾಗೂ ಅನನ್ಯಾ ಪಾಂಡೆ ಜೊತೆ ಮಾತುಕತೆ ನಡೆಯುತ್ತಿವೆ. ಸದ್ಯ ಶ್ರೀಲೀಲಾ ಅವರು ಬಾಲಿವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈಗಾಗಲೇ ಕಾರ್ತಿಕ್ ಆರ್ಯನ್ ಜೊತೆ ಆಶಿಕಿ 3 ಚಿತ್ರದಲ್ಲಿ ನಟಿಸುತ್ತಿದ್ದಾರೆ.