ಕತ್ರಿನಾ ಕೈಫ್ 2 ತಿಂಗಳ ಗರ್ಭಿಣಿ ವದಂತಿ; ವೈರಲ್ ಸುದ್ದಿ ಬಗ್ಗೆ ವಿಕ್ಕಿ ಕೌಶಲ್ ಟೀಂ ಪ್ರತಿಕ್ರಿಯೆ

Published : May 13, 2022, 12:29 PM IST

ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಗರ್ಭಿಣಿ ಎನ್ನುವ ಸುದ್ದಿ ವೈರಲ್ ಆಗಿದೆ. ಕತ್ರಿನಾ ಕೈಫ್ ಬಾಲಿವುಡ್ ನಟ ವಿಕ್ಕಿ ಕೌಶಲ್ ಜೊತೆ ಡಿಸೆಂಬರ್ ತಿಂಗಳಲ್ಲಿ ಹಸೆಮಣೆ ಏರಿದರು. ರಾಜಸ್ಥಾನದಲ್ಲಿ ವಿಕ್ಕಿ ಮತ್ತು ಕತ್ರಿನಾ ಇಬ್ಬರೂ ವಿವಾಹ ಜೀವನಕ್ಕೆ ಕಾಲಿಟ್ಟರು. ಮದುವೆ ಬಳಿಕ ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.  

PREV
16
ಕತ್ರಿನಾ ಕೈಫ್ 2 ತಿಂಗಳ ಗರ್ಭಿಣಿ ವದಂತಿ; ವೈರಲ್ ಸುದ್ದಿ ಬಗ್ಗೆ ವಿಕ್ಕಿ ಕೌಶಲ್ ಟೀಂ ಪ್ರತಿಕ್ರಿಯೆ

ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಗರ್ಭಿಣಿ ಎನ್ನುವ ಸುದ್ದಿ ವೈರಲ್ ಆಗಿದೆ. ಕತ್ರಿನಾ ಕೈಫ್ ಬಾಲಿವುಡ್ ನಟ ವಿಕ್ಕಿ ಕೌಶಲ್ ಜೊತೆ ಡಿಸೆಂಬರ್ ತಿಂಗಳಲ್ಲಿ ಹಸೆಮಣೆ ಏರಿದರು. ರಾಜಸ್ಥಾನದಲ್ಲಿ ವಿಕ್ಕಿ ಮತ್ತು ಕತ್ರಿನಾ ಇಬ್ಬರೂ ವಿವಾಹ ಜೀವನಕ್ಕೆ ಕಾಲಿಟ್ಟರು. ಮದುವೆ ಬಳಿಕ ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

26

ಸ್ಟಾರ್ ದಂಪತಿ ಆಗಾಗ ಪ್ರವಾಸ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ಕತ್ರಿನಾ ತಾಯಿಯಾಗುತ್ತಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ನಲ್ಲಿ ಗುಲ್ಲಾಗಿದೆ.

36

ಈ ಬಗ್ಗೆ ವಿಕ್ಕಿ ಕೌಶಲ್ ಟೀಂ ಪ್ರತಿಕ್ರಿಯೆ ನೀಡಿದೆ. ಗರ್ಭಿಣಿ ವದಂತಿ ಬಗ್ಗೆ ಕತ್ರಿನಾ ಅಥವಾ ವಿಕ್ಕಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ವಿಕ್ಕಿ ಟೀಂ ಸ್ಪಷ್ಟನೆ ನೀಡುವ ಮೂಲಕ ವದಂತಿಗೆ ಬ್ರೇಕ್ ಹಾಕಿದ್ದಾರೆ.

46

ಕತ್ರಿನಾ ಕೈಫ್ ಗರ್ಭಿಣಿಯಲ್ಲ. ಸದ್ಯ ಅವರು ತಮ್ಮ ವೃತ್ತಿ ಜೀವನದ ಕಡೆ ಮತ್ತು ವಿಕ್ಕಿ ಕೌಶಲ್ ಜೊತೆ ದಾಂಪತ್ಯ ಜೀವನದ ಕಡೆ ಹೆಚ್ಚು ಗಮನ ಹರಿಸಿದ್ದಾರೆ ಎಂದು ಹೇಳಿದ್ದಾರೆ. ಈ ರೀತಿಯ ಸುದ್ದಿಯಿಂದ ಕತ್ರಿನಾ ವೃತ್ತಿ ಜೀವನದ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಹೇಳಿದ್ದಾರೆ.

56
Image: Katrina Kaif/Instagram

ಕತ್ರಿನಾ ಕೈಫ್ ಸದ್ಯ ಫೋನ್ ಬೂತ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ಕಾಯುತ್ತಿದ್ದಾರೆ. ಮೇರಿ ಕ್ರಿಸ್ಮಸ್, ಟೈಗರ್ -3 ಸಿನಿಮಾ ಸೇರಿದಂತೆ ಇನ್ನು ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಕತ್ರಿನಾ ಸೂರ್ಯವಂಶಿ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

66
Image: Katrina Kaif/Instagram

ವಿಕ್ಕಿ ಕೌಶಲ್ ಸಹ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಕೌಶಲ್ ಸದ್ಯ ಗೋವಿಂದ ನಾಮ್ ಮೇರಾ, ದಿ ಗ್ರೇಟ್ ಇಂಡಿಯನ್ ಫ್ಯಾಮಿಲಿ ಸೇರಿದಂತೆ ಇನ್ನು ಹಸರಿಡದ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ಕಿ ಕೊನೆಯದಾಗಿ ಸರ್ದಾರ್ ಉಧಮ್ ಸಿಂಗ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ‌

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories