ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್ ಪ್ರಾರಂಭವಾಗಿದೆ. ಮೇ 17ರಿಂದ ಅದ್ದೂರಿಯಾಗಿ ಉದ್ಘಾಟನೆಯಾಗಿದೆ. 75ನೇ ಕಾನ್ ಚಲನ ಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳು ಮತ್ತಷ್ಟು ರಂಗು ಹೆಚ್ಚಿಸಿದ್ದಾರೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ದಕ್ಷಿಣದ ಖ್ಯಾತ ನಟಿ ತಮನ್ನಾ ಭಾಟಿಯಾ ಕೂಡ ಭಾಗಿಯಾಗಿದ್ದಾರೆ.
ಅಂತರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್ ಪ್ರಾರಂಭವಾಗಿದೆ. ಮೇ 17ರಿಂದ ಅದ್ದೂರಿಯಾಗಿ ಉದ್ಘಾಟನೆಯಾಗಿದೆ. 75ನೇ ಕಾನ್ ಚಲನ ಚಿತ್ರೋತ್ಸವದಲ್ಲಿ ಭಾರತೀಯ ಸೆಲೆಬ್ರಿಟಿಗಳು ಮತ್ತಷ್ಟು ರಂಗು ಹೆಚ್ಚಿಸಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಉದ್ಘಾಟನಾ ಸಮಾರಂಭದಲ್ಲಿ ದೇಸಿ ಉಡುಗೆ ಧರಿಸಿ ಗಮನ ಸೆಳೆದಿದ್ದಾರೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ದಕ್ಷಿಣದ ಖ್ಯಾತ ನಟಿ ತಮನ್ನಾ ಭಾಟಿಯಾ ಕೂಡ ಭಾಗಿಯಾಗಿದ್ದಾರೆ.
26
ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಭಾಗಿಯಾದ ದಕ್ಷಿಣ ಭಾರತದ ಖ್ಯಾತ ನಟಿಯರಲ್ಲಿ ತಮನ್ನಾ ಕೂಡ ಒಬ್ಬರು. ಕಾನ್ ಚಿತ್ರೋತ್ಸವದಲ್ಲಿ ಭಾಗಿಯಾದ ಸುಂದರ ಕ್ಷಣವನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
36
ಕಾನ್ ಚಿತ್ರೋತ್ಸವದಲ್ಲಿ ತಮನ್ನಾ ಕಪ್ಪು ಮತ್ತು ಬಿಳಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ್ದಾರೆ. ಕಾನ್ ರೆಡ್ ಕಾರ್ಪೆಟ್ ನಲ್ಲಿ ಹೆಜ್ಜೆ ಹಾಕಿದ ಫೋಟೋಗಳನ್ನು ತಮನ್ನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
46
ತಮನ್ನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮನ್ನಾ ಸುಂದರ ಫುಟೋಗಳಿಗೆ ಸಿಕ್ಕಾಪಟ್ಟೆ ಲೈಕ್ಸ್ ಮತ್ತ ಕಾಮೆಂಟ್ ಹರಿದು ಬಂದಿದೆ.
56
ನಟಿ ತಮನ್ನಾ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಮಿಲ್ಕಿ ಬ್ಯೂಟಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಬೋಲೆ ಚೂಡಿಯನ್, ಬೋಲ ಶಂಕರ್, ಎಫ್-3, ಗುರುತುಂದ ಸೀತಾಕಲಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
66
ನಟಿ ತಮನ್ನಾ ಕನ್ನಡದ ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿಧಿ ಪಾತ್ರದಲ್ಲಿ ತಮನ್ನಾ ಮಿಂಚಿದ್ದಾರೆ. ಈ ಸಿನಿಮಾಗೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.