ಇಷ್ಟು ದಿನ ತಾಯ್ತನದ ಖುಷಿಯಲ್ಲಿದ್ದ ನಟಿ ದೀಪಿಕಾ ಪಡುಕೋಣೆ ಮತ್ತೆ ಸಿನಿ ರಂಗಕ್ಕೆ ಎಂಟ್ರಿ. ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಲ್ಲಿ ದೀಪಿಕಾಗೆ 20 ಕೋಟಿ ರು. ಸಂಭಾವನೆ. ಪ್ರಸಕ್ತ ಭಾರತೀಯ ಚಿತ್ರರಂಗದಲ್ಲಿ ಅತ್ಯಧಿಕ ಸಂಭಾವನೆ ಪಡೆದ ನಟಿ ಎಂಬ ಹೆಗ್ಗಳಿಕೆ. ‘ಸ್ಪಿರಿಟ್’ 2027ರಲ್ಲಿ ರಿಲೀಸ್ ಆಗುವ ಸಾಧ್ಯತೆ.
ಇಷ್ಟು ದಿನ ತಾಯ್ತನದ ಖುಷಿಯಲ್ಲಿದ್ದ ನಟಿ ದೀಪಿಕಾ ಪಡುಕೋಣೆ ಮತ್ತೆ ಕಾರ್ಯಕ್ಷೇತ್ರಕ್ಕೆ ಮರಳಿದ್ದಾರೆ. ರೀ ಎಂಟ್ರಿ ಆರಂಭದಲ್ಲೇ ಅತ್ಯಧಿಕ ಸಂಭಾವನೆ ಪಡೆಯುವ ಮೂಲಕ ದೊಡ್ಡಮಟ್ಟದ ಸುದ್ದಿ ಮಾಡಿದ್ದಾರೆ.
25
‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಲ್ಲಿ ನಾಯಕಿ ದೀಪಿಕಾಗೆ 20 ಕೋಟಿ ರು. ಸಂಭಾವನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅತ್ಯಧಿಕ ಸಂಭಾವನೆ ಪಡೆದ ನಟಿ ಎಂಬ ಹೆಗ್ಗಳಿಕೆ ದೀಪಿಕಾ ಪಾಲಾಗಿದೆ.
35
ಈಗಾಗಲೇ ಕಿಂಗ್ ಖಾನ್ ಜೊತೆಗೆ ‘ಕಿಂಗ್’ ಸಿನಿಮಾಕ್ಕೆ ಸೈನ್ ಮಾಡಿರುವ ದೀಪಿಕಾ ಆ ಬಳಿಕ ‘ಸ್ಪಿರಿಟ್’ ಟೀಮ್ ಸೇರಿಕೊಳ್ಳುವ ಸಾಧ್ಯತೆ ಇದೆ. ‘ಸ್ಪಿರಿಟ್’ 2027ರಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.
ನಟಿ ದೀಪಿಕಾ ಪಡುಕೋಣೆ ಕೂಡ ಈಗ ಮೊದಲಿಗಿಂತ ಹೆಚ್ಚು ಚೂಸಿ ಆಗಿದ್ದಾರೆ. ಅಳೆದು ತೂಗಿ ಪಾತ್ರ ಇಷ್ಟವಾದರೆ ಮಾತ್ರ ಸಿನಿಮಾ ಒಪ್ಪಿಕೊಳ್ಳುತ್ತಾರೆ. ಕಾರಣ, ಸಿನಿಮಾ ನಟನೆಗೆ ಬಂದ ಪ್ರಾರಂಭದಲ್ಲಿ ಆಯ್ಕೆಗೆ ಅವಕಾಶ ಇರಲಿಲ್ಲ.
55
ಬಂದ ಸಿನಿಮಾಗಳನ್ನೆಲ್ಲಾ ಒಪ್ಪಿಕೊಂಡು ಮಾಡುವ ಅನಿವಾರ್ಯತೆ ಇರುತ್ತಿತ್ತು. ಆದರೆ ಈಗ ಹಾಗಲ್ಲ, ಇಷ್ಟವಾದರೆ ಮಾತ್ರ ಒಪ್ಪಿಕೊಂಡು ಮಾಡುವ ಹಂತಕ್ಕೆ ಬೆಳೆದಿದ್ದಾರೆ. ಸದ್ಯ ಅವರು ನಟ ಶಾರುಖ್ ಖಾನ್ ಹಾಗೂ ಪ್ರಭಾಸ್ ಜೋಡಿಯಾಗಿ ಮಾತ್ರ ಸಿನಿಮಾ ಮಾಡುವ ಹಂತಕ್ಕೆ ಬಂದಿದ್ದಾರೆ.