ಮಗಳು ಹುಟ್ಟಿದ ಮೇಲೆ ಚಿತ್ರರಂಗದಿಂದ ಬಿಡುವು ಪಡೆದಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಇದೀಗ ಮತ್ತೆ ಶಾರೂಖ್ ಖಾನ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಮುಖ್ಯಪಾತ್ರದಲ್ಲಿ ನಟಿಸಲಿದ್ದಾರೆ.
27
ಈ ಕುರಿತ ಅಧಿಕೃತ ಹೇಳಿಕೆ ಇನ್ನಷ್ಟೇ ಹೊರಬೀಳಬೇಕಿದೆ. ಆದರೆ ಈ ಚಿತ್ರಕ್ಕಾಗಿ ದೀಪಿಕಾ ಮತ್ತೆ ಜಿಮ್‌ನಲ್ಲಿ ಬೆವರಿಳಿಸಿ ಫಿಟ್‌ನೆಸ್ ಕಡೆ ಗಮನ ನೀಡುತ್ತಿದ್ದಾರೆ.
37
ಮೇ 18ರಿಂದ ಈ ಸಿನಿಮಾದ ಶೂಟಿಂಗ್ ಶುರುವಾದರೂ ದೀಪಿಕಾ ಜೂನ್ ಬಳಿಕ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಸಿನಿಮಾ 2026ರ ದ್ವಿತೀಯಾರ್ಧದಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇದೆ.
ಖಿನ್ನತೆಗೆ ತುತ್ತಾದಾಗ ಜೀವನ ಸಾಕೆನ್ನಿಸಿತ್ತು: ಬೋರ್ಡ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಸಂಭಾಷಣೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದಾರೆ.
57
2015ರಲ್ಲಿ ನಾನು ಖಿನ್ನತೆಗೆ ಒಳಗಾಗಿದ್ದಾಗ ಅದರ ಕುರಿತು ಮಾತನಾಡುವುದಕ್ಕೆ ಅವಕಾಶವಿರಲಿಲ್ಲ. ಆದರೆ ಮನಬಿಚ್ಚಿ ಮಾತನಾಡತೊಡಗಿದಾಗ ನಾನು ಹಗುರಳಾಗುತ್ತಿದ್ದೆ. ಅಲ್ಲಿಂದ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸಲುಸ ಶುರು ಮಾಡಿದೆ ಎಂದು ಹೇಳಿದರು.
67
ಖಿನ್ನತೆಯನ್ನು ಎದುರಿಸುವ ಬಗೆಯನ್ನು ತಮ್ಮ ಅನುಭವದೊಂದಿಗೆ ವಿವರಿಸಿದ ನಟಿ, ಪ್ರಧಾನಿ ಮೋದಿಯವರ ಎಕ್ಸಾಂ ವಾರಿಯರ್ಸ್ ಪುಸ್ತಕದಲ್ಲಿ ಹೇಳಿರುವಂತೆ ಭಾವನೆಗಳನ್ನು ನಿಗ್ರಹಿಸುವ ಬದಲು ವ್ಯಕ್ತಪಡಿಸಬೇಕು. 2014ರಲ್ಲಿ ನಿರಂತರವಾಗಿ ಕೆಲಸದಲ್ಲಿ ತೊಡಗಿದ್ದ ನಾನು ಇದ್ದಕ್ಕಿದ್ದಂತೆ ಒಂದು ದಿನ ಪ್ರಜ್ಞಾಹೀನಳಾದೆ.
77
ಆಗ ನನ್ನ ತಾಯಿಗೆ ಏನೋ ಸಮಸ್ಯೆ ಇರುವುದು ತಿಳಿಯಿತು. ಆ ಬಗ್ಗೆ ವಿಚಾರಿಸಿದಾಗ ನನಗೆ ಏನಾಗುತ್ತಿತ್ತೆಂದು ತಿಳಿಯದೆ, ಜೀವನ ಸಾಕೆನಿಸುತ್ತಿದೆ ಎಂದೆ. ಆಗ ಅವರು ನನ್ನನ್ನು ಮನಶ್ಶಾಸ್ತ್ರಜ್ಞರ ಬಳಿ ಕರೆದೊಯ್ದರು ಎಂದರು.