ದೀಪಿಕಾ ಪಡುಕೋಣೆ ಸದ್ಯ ಬಾಲಿವುಡ್ ಜೊತೆಗೆ ದಕ್ಷಿಣ ಭಾರತದ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಪ್ರಭಾಸ್ ಜೊತೆ ಮೊದಲ ಬಾರಿಗೆ ದೀಪಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ. ನಾಗ್ ಅಶ್ವಿನ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ದೀಪಿಕಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಬಾಲಿವುಡ್ ನಲ್ಲಿ ಶಾರುಖ್ ಖಾನ್ ಜೊತೆ ಪಠಾಣ್ ಸಿನಿಮಾ ಮುಗಿಸಿದ್ದಾರೆ.