ಬಾಲಿವುಡ್ ಸ್ಟಾರ್ ನಟಿ ಶ್ರೀದೇವಿ ಅವರ ಪುತ್ರಿ ಹಾಗೂ ಬಾಲಿವುಡ್ ನಟಿ ಜಾನ್ವಿ ಕಪೂರ್ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಪಿಂಕ್ ಬಣ್ಣದ ಸಿಂಪಲ್ ಸೀರೆ ಉಟ್ಟುಕೊಂಡು ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ.
26
ಜಾನ್ವಿ ಪಿಂಕ್ ಸ್ಲೀವ್ಲೆಸ್ ಬ್ಲೌಸ್ ಧರಿಸಿ, ಸಿಂಪಲ್ ಆಗಿ ಹೇರ್ಸ್ಟೈಲ್ ಮಾಡಿಕೊಂಡು ಸೆರಗನ್ನು ಉದ್ದನೆ ಇಳಿ ಬಿಟ್ಟಿದ್ದು, ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಫೋಟೋ ನೋಡಿದ ನೆಟ್ಟಿಗರು ಥೇಟ್ ಶ್ರೀದೇವಿಯಂತೆ ಕಾಣ್ತಿದ್ದಾರೆ ಎಂದಿದ್ದಾರೆ.
36
ಜಾನ್ವಿ ತೆಲುಗಿನಲ್ಲಿ ಎನ್‌ಟಿಆರ್ ಜೊತೆ ಎನ್‌ಟಿಆರ್ 30ರಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾದ ಮೂಲಕ ಮೊದಲ ಬಾರಿಗೆ ಸೌತ್ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡುತ್ತಿದ್ದಾರೆ.
46
ಖ್ಯಾತ ನಟಿ ಶ್ರೀದೇವಿ ಮಗಳು ಜಾನ್ವಿ ಕಪೂರ್ ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗವಿದೆ. ಜಾನ್ವಿಗೆ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಸಿಗದೇ ಇದ್ದರೂ ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇದೆ.
56
ಸದ್ಯ ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಜಾನ್ವಿ ಕಪೂರ್ ಮೀನುಗಾರನ ಮಗಳಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
66
ಬಾಲಿವುಡ್ ನಟಿ ಜಾನ್ವಿ ಕಪೂರ್ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರ ಟ್ರಿಪ್ ಪೋಟೋಗಳು ಹಾಗೂ ಬಿಕಿನಿ ಪೋಟೋಗಳು ಈ ಹಿಂದೆ ಸಾಕಷ್ಟು ವೈರಲ್ ಆಗಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.